)
ಸಿಎಂ ನಿವಾಸದ ಸಮೀಪ ಬೃಹತ್ ಮರ ನೆಲಕ್ಕುರುಳಿದ್ದು, ಪರಿಣಾಮ ವಾಹನಗಳು ಸಂಪೂರ್ಣ ಜಖಂ ಆಗಿದೆ. ಅಶೋಕ ಹೋಟೆಲ್ ಮುಂಭಾಗದಲ್ಲಿ ಟೆಂಪೋ ಟ್ರಾವೆಲರ್ ಮತ್ತು ಇನ್ನೋವಾ ಕಾರ್ ಮೇಲೆ ಮರ ಬಿದ್ದಿದೆ. ಮರ ಬಿದ್ದ ಪರಿಣಾಮ ಭಾರೀ ಟ್ರಾಫಿಕ್ ಜಾಮ್ ಆಗಿದ್ದು, ಇನ್ನು ಈ ಘಟನೆಯಲ್ಲಿ ಇಬ್ಬರು ವಿದೇಶಿಗರು ಜಸ್ಟ್ ಮಿಸ್ ಆಗಿದ್ದಾರೆ. ಸದ್ಯ ಇಡೀ ರಸ್ತೆಯನ್ನ ಟ್ರಾಫಿಕ್ ಪೊಲೀಸರು ಬಂದ್ ಮಾಡಿದ್ದಾರೆ. ಇನ್ನೊಂದೆಡೆ ಮರ ಬಿದ್ದು ಅರ್ಧ ಗಂಟೆಯಾಗಿದ್ರು , ಬಿಬಿಎಂಪಿ ಅರಣ್ಯ ಸಿಬ್ಬಂದಿ ಇನ್ನೂ ಸ್ಥಳಕ್ಕೆ ಬಂದಿಲ್ಲ. ಕೊಡಲಿ ಹಿಡಿದು ಟ್ರಾಫಿಕ್ ಪೊಲೀಸರೇ ಮರವನ್ನ ತೆರವು ಮಾಡುತ್ತಿದ್ದಾರೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕೊಂಚ ತಗ್ಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ಒಂದು ವಾರದಿಂದ ಕರಾವಳಿ ಭಾಗದ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಇಂದಿನಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದರ ಹೊರತಾಗಿ ಬೀದರ್, ಕಲ್ಬುರ್ಗಿ, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಮುನ್ಸೂಚನೆಯಿದೆ.
ಕೊಡಗಿನ ತಲಕಾವೇರಿ-ಭಾಗಮಂಡಲ, ಮಡಿಕೇರಿ, ನಾಪೋಕ್ಲು, ಸಂಪಾಜೆ, ಶಾಂತಳ್ಳಿ, ಹುದಿಕೇರಿ, ಶ್ರೀಮಂಗಲ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ. ಈ ಭಾಗದ ನದಿಗಳೂ ಸಹ ತುಂಬಿಹರಿಯುತ್ತಿದ್ದು, ಜನರಲ್ಲಿ ಭಯ ಮನೆ ಮಾಡಿದೆ.
ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ನದಿಗಳು ತುಂಬಿ ಹರಿಯುತ್ತಿದೆ. ದಕ್ಷಿಣ ಕನ್ನಡದಲ್ಲಿ ಹರಿಯುವ ಕುಮಾರಧಾರಾ ಮತ್ತು ನೇತ್ರಾವತಿ ಎರಡೂ ನದಿಯಲ್ಲಿ ನೀರು ಮತ್ತೆ ಹೆಚ್ಚಳವಾಗಿದ್ದು, ಮಂಗಳವಾರ ಸಂಜೆಯ ಹೊತ್ತಿಗೆ ಎರಡೂ ನದಿ ಪ್ರವಾಹದ ರೀತಿಯಲ್ಲಿಉಕ್ಕಿ ಹರಿಯಲಾರಂಭಿಸಿದೆ.
ಕಾಸರಗೋಡಿನಲ್ಲಿ ಚಂಡಮಾರುತದ ಪರಿಚಲನೆಯಿಂದ ಕರ್ನಾಟಕದಲ್ಲೂ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಈ ಜಿಲ್ಲೆಯಲ್ಲಿ ಸರಿಸುಮಾರು 2.5 ಕೋಟಿ ಮೌಲ್ಯದ ಬೆಳೆ ಹಾನಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಕೋಯಿಕ್ಕೋಡ್, ವಯನಾಡ್ ಮತ್ತು ಮಲಪ್ಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಕೂಡ ನೀಡಲಾಗಿತ್ತು.
Mangaluru Rain Live : ಮನೆ ಮೇಲೆ ಗುಡ್ಡ ಕುಸಿತ
>> ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ.
>> ಕಣ್ಣೂರಿನ ದಯಂಬುವಿನಲ್ಲಿ ಮನೆ ಮೇಲೆ ಗುಡ್ಡ ಕುಸಿತ ಉಂಟಾಗಿದೆ.
>> ಅದೃಷ್ಟವಶಾತ್ ಮನೆಯಲ್ಲಿ ಯಾರು ಇರದ ಕಾರಣ ಬಹು ದೊಡ್ಡ ದುರಂತ ತಪ್ಪಿದೆ.
Bengaluru Rain Live Updates: ಬೆಂಗಳೂರಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ವರುಣ
>> ರಾಜಧಾನಿಯಲ್ಲಿ ಮಠ ಮಠ ಮಧ್ಯಾಹ್ನ ಮಳೆ ಆಗಮನ
>> ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ
>> ಮೆಜೆಸ್ಟಿಕ್, ಆರ್ ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್ ಸುತ್ತ ಮಳೆ
>> ಏಕಾ ಏಕಿ ಬಂದ ಮಳೆಗೆ ವಾಹನ ಸವಾರರು ಪರದಾಟ
>> ಬಸ್ ಶೆಲ್ಟರ್ ಮೊರೆ ಹೋದ ದ್ವಿಚಕ್ರ ವಾಹನ ಸವಾರರು
>> ಇಂದು ಸಂಜೆ ಬಳಿಕವೂ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ
>> ಈಗಾಗಲೇ ಮುನ್ಸೂಚನೆ ನೀಡಿರೋ ಹವಾಮಾನ ಇಲಾಖೆ
chikkodi rain live updates: 12 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ 6 ಸೇತುವೆಗಳು ಜಲಾವೃತ
>> ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ.
>> ಕೃಷ್ಣಾ, ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ.
>> ಕೃಷ್ಣಾ ನದಿಗೆ 54 ಸಾವಿರ ಕ್ಯೂಸೆಕ್ ನೀರಿನ ಒಳ ಹರಿವು.
>> ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ 6 ಕೆಳ ಹಂತದ ಸೇತುವೆಗಳು ಮತ್ತೆ ಮುಳುಗಡೆ.
>> 12 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ 6 ಕೆಳ ಹಂತದ ಸೇತುವೆಗಳು.
>> ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಮಲ್ಲಿಕವಾಡ-ದತ್ತವಾಡ.
>> ವೇದಗಂಗಾ ನದಿಯ ಬಾರವಾಡ-ಕುನ್ನೂರು, ಭೋಜ್-ಕಾರದಗಾ, ಭೋಜವಾಡಿ - ಕುನ್ನೂರು.
>> ಕೃಷ್ಣಾ ನದಿಗೆ ಅಡ್ಡಲಾಗಿರುವ ಯಡೂರು-ಕಲ್ಲೋಳ, ಬಾವನಸೌಂದತ್ತಿ - ಮಾಂಜರಿ ಸೇತುವೆಗಳು ಜಲಾವೃತ.
Shivamogga Rain Live Updates : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ
>> ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಹೊಸ ನೀರು ಡ್ಯಾಂ ಗೆ ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತಿದೆ.
>> ತುಂಗಾ ಡ್ಯಾಂ ನಿಂದ ನೀರು ಬಿಟ್ಟ ಹಿನ್ನಲೆಯಲ್ಲಿ ತುಂಗಾ ನದಿ ಶಿವಮೊಗ್ಗ ಹೃದಯ ಭಾಗದಲ್ಲಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ.
karnataka rains live updates: ದಕ್ಷಿಣ ಕರ್ನಾಟಕದ ಹಲವೆಡೆ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ಮಂಗಳೂರು ಹಾಗೂ ಚಿಕ್ಕಮಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ಕಳೆದ ದಿನ ಬೆಳಗ್ಗೆ ಮಂಗಳೂರಿನ ಕಣ್ಣೂರಿನ ಸಮೀಪ ಮನೆಯೊಂದರ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮತ್ತೊಂದೆಡೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊಸೂರು ಗ್ರಾಮದಲ್ಲಿ ತಡರಾತ್ರಿ ಸುರಿದ ಭಾರೀ ಮಳೆಗೆ ಗಿಡ್ಡಪ್ಪ ಎಂಬವರ ಮನೆಯ ಗೋಡೆ ಕುಸಿದಿದೆ. ಇನ್ನು ಇಂದು ಕೂಡ ಭಾರೀ ಮಳೆ ಸುರಿಯುವ ಭೀತಿ ಇದ್ದು, ರಾಜ್ಯದ ಹಲವು ಜಿಲ್ಲೆಗಳ ಕ್ಷಣ ಕ್ಷಣದ ಅಪ್ಡೇಟ್ಸ್ ಇಲ್ಲಿದೆ