ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಪ್ರತಿಷ್ಠೆಯ ಕಣವಾದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ.
ರಾಜ್ಯದ 105 ನಗರ ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ 31ರಂದು ನಡೆದಿದ್ದ ಚುನಾವನೆಯ ಮತ ಎಣಿಕೆ ಕಾರ್ಯ ಇಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಆರಂಭವಾಗಿದ್ದು, ಮಧ್ಯಾಹ್ನ 12 ಗಂಟೆ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ.
ಒಟ್ಟು 105 ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 9121 ಅಭ್ಯರ್ಥಿಗಳು ಕಣದಲ್ಲಿದ್ದು, 3 ಮಹಾನಗರ ಪಾಲಿಕೆ, 102 ನಗರ, ಸ್ಥಳೀಯ ಸಂಸ್ಥೆಗಳು, 29 ನಗರಸಭೆಗಳು, 53 ಪುರಸಭೆಗಳು ಮತ್ತು 20 ಪಟ್ಟಣ ಪಂಚಾಯಿತಿಗಳ ಮತಎಣಿಕೆ ಕಾರ್ಯ ನಡೆಯುತ್ತಿದ್ದು, ಮೈಸೂರು ಮಹಾನಗರ ಪಾಲಿಕೆಯಲ್ಲಿ ಭಾರೀ ಪೈಪೋಟಿ ಕಂಡುಬಂದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ ಮತಎಣಿಕೆ ಕೇಂದ್ರಗಳಲ್ಲಿ ಪೋಲಿಸ್ ಬಿಗಿ ಭದ್ರತೆ ಒದಗಿಸಲಾಗಿದೆ.