/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಬೆಂಗಳೂರು: ಕರೋನಾವೈರಸ್ ಮಣಿಸಲು ದೇಶಾದ್ಯಂತ ವ್ಯಾಕ್ಸಿನೇಷನ್ ಅಭಿಯಾನ ಆರಂಭವಾಗಿದೆ. ಆದರೂ ಕರೋನಾವೈರಸ್ ಎರಡನೇ ಅಲೆಯ ಅಬ್ಬರ ಕರ್ನಾಟಕವನ್ನು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ಈ ಮಧ್ಯೆ  ಕಠಿಣ ನಿಯಮಗಳನ್ನು ಜಾರಿಗೊಳಿಸುವುದೊಂದೇ ಕರೋನಾವೈರಸ್ ಎರಡನೇ ಅಲೆಯನ್ನು ತಡೆಯಲು ಇರುವ ದಾರಿ ಎಂಬುದಾಗಿ ತಾಂತ್ರಿಕ ತಜ್ಞರ ಸಮಿತಿ ರಾಜ್ಯ ಸರ್ಕಾರಕ್ಕೆ ವರದಿ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಅಥವಾ ಸೆಮಿ ಲಾಕ್‌ಡೌನ್‌ ಜಾರಿಗೆ ತರಬಹುದು ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಇಂತಹ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಹೌದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ (Dr K Sudhakar), ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಆರಂಭವಾಗಿದೆ. ಕಠಿಣ ಕಾನೂನುಗಳನ್ನು ಜಾರಿಗೊಳಿಸುವ ಮೂಲಕ ಇದನ್ನು ನಿಯಂತ್ರಣಕ್ಕೆ ತರಲಾಗುವುದು. ಆದರೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಗೊಳಿಸುವ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ - ಲೋಕಸಭಾ ಸ್ಪೀಕರ್ ಓಂ ಬಿರ್ಲಾಗೆ ಕೊರೊನಾ ಧೃಢ, ಏಮ್ಸ್ ಗೆ ದಾಖಲು

ಈ ವೇಳೆ ಕರೋನಾವೈರಸ್ (Coronavirus)ನಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಸಾರ್ವಜನಿಕರು ಮಾಸ್ಕ್ (Mask) ಧರಿಸದೆ ಮನೆಯಿಂದ ಹೊರಬರಬಾರದು. ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯ. ಸಭೆ, ಸಮಾರಂಭಗಳಲ್ಲಿಯೂ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಅನಿವಾರ್ಯವಾಗಿದೆ. ಜೊತೆಗೆ ಸಾಮಾಜಿಕ ಅಂತರವನ್ನು ಕೂಡ ಕಾಯ್ದುಕೊಳ್ಳಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.

ಇದನ್ನೂ ಓದಿ - ದೇಶದೆಲ್ಲೆಡೆ ಮತ್ತೊಮ್ಮೆ ಕೊರೊನಾ ಮಹಾಮಾರಿ ಸದ್ದು, ರೆಡ್ ಅಲರ್ಟ್ ಜಾರಿ

ಮಾಸ್ಕ್ ಧರಿಸದಿದ್ದರೆ ದಂಡ, ಕ್ರಮ: 
ಇದಲ್ಲದೆ ಯಾವುದೇ ಕಾರ್ಯಕ್ರಮದಲ್ಲಿ ಎಲ್ಲರೂ ಮಾಸ್ಕ್ (Mask) ಧರಿಸದೆ ಇದ್ದಲ್ಲಿ ಕಾರ್ಯಕ್ರಮ ಆಯೋಜಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಆರೋಗ್ಯ ಸಚಿವರು, ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Section: 
English Title: 
Lockdown: Health Minister statement about semi-lockdown in the state?
News Source: 
Home Title: 

Lockdown: ರಾಜ್ಯದಲ್ಲಿ ಸೆಮಿ ಲಾಕ್‌ಡೌನ್‌ ಬಗ್ಗೆ ಆರೋಗ್ಯ ಸಚಿವರು ಹೇಳಿದ್ದೇನು?

Lockdown: ರಾಜ್ಯದಲ್ಲಿ ಸೆಮಿ ಲಾಕ್‌ಡೌನ್‌ ಬಗ್ಗೆ ಆರೋಗ್ಯ ಸಚಿವರು ಹೇಳಿದ್ದೇನು?
Caption: 
Coronavirus second wave in Karnataka
Yes
Is Blog?: 
No
Tags: 
Facebook Instant Article: 
Yes
Highlights: 

ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಆರಂಭವಾಗಿದೆ

ಕಠಿಣ ನಿಯಮಗಳನ್ನು ಜಾರಿಗೊಳಿಸುವುದೊಂದೇ ಕರೋನಾವೈರಸ್ ಎರಡನೇ ಅಲೆಯನ್ನು ತಡೆಯಲು ಇರುವ ದಾರಿ - ತಾಂತ್ರಿಕ ತಜ್ಞರ ಸಮಿತಿ

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಜಾರಿಯಾಗಲಿದೆ ಎಂಬ ಬಗ್ಗೆ ಅರೋಗ್ಯ ಸಚಿವರ ಪ್ರತಿಕ್ರಿಯೆ

Mobile Title: 
Lockdown: ರಾಜ್ಯದಲ್ಲಿ ಸೆಮಿ ಲಾಕ್‌ಡೌನ್‌ ಬಗ್ಗೆ ಆರೋಗ್ಯ ಸಚಿವರು ಹೇಳಿದ್ದೇನು?
Yashaswini V
Publish Later: 
Yes
Publish At: 
Monday, March 22, 2021 - 12:03
Created By: 
Yashaswini V
Updated By: 
Yashaswini V
Published By: 
Yashaswini V
Request Count: 
1
Is Breaking News: 
No