ಬೆಂಗಳೂರು : ರಾಜ್ಯದಲ್ಲಿ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದ್ದು, ಇಂದು ಅಥವಾ ನಾಳೆ ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ(BS Yediyurappa), ಸಧ್ಯ ರಾಜ್ಯದಲ್ಲಿ ಜಾರಿ ಇರುವ ಜನತಾ ಕರ್ಪ್ಯೂ ಅನ್ನು ಜನರು ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಎಚ್ಚರಿಕೆಗಳನ್ನು ಗಮನಿಸುತ್ತಿಲ್ಲ. ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದನ್ನು ಮಾಡುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಲಾಕ್ ಡೌನ್ ಅನಿವಾರ್ಯವಾಗಬಹುದು ಎಂದು ಹೇಳಿದ್ದಾರೆ.


ಇದನ್ನೂ ಓದಿ : ಕರ್ನಾಟಕ ರಾಜಕೀಯದಲ್ಲಿ ವಿಶ್ವನಾಥ್ V/s ವಿಶ್ವನಾಥ್.


ರಾಜ್ಯದಲ್ಲಿ ಸರಿಯಾಗಿ ಲಾಕ್ ಡೌನ್(Lockdown) ಪಾಲನೆ ಮಾಡುತ್ತಿಲ್ಲ. ಹೀಗಾಗಿ ಬಿಗಿ ಕ್ರಮ ಅನಿವಾರ್ಯವಾಗಬಹುದು. ಇಂದು ಅಥವಾ ನಾಳೆ ಇದರ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.


ಇದನ್ನೂ ಓದಿ : K Sudhakar : ಕೊರೋನಾ ಕರ್ಫ್ಯೂ ವಿಫಲ, ಲಾಕ್ ಡೌನ್ ಸುಳಿವು ನೀಡಿದ ಸಚಿವ ಸುಧಾಕರ್!


 ರಾಜ್ಯ ಸರ್ಕಾರ ಕೂಡ ಕರ್ನಾಟಕದಲ್ಲಿ ಕೊರೋನಾ(Corona) ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ತಲೆ ಕೆಡಿಸಿಕೊಂಡಿದ್ದು, ಇಂದು ಸಂಜೆ ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ. ಈ ಸಭೆಯ ಬಳಿಕ ಕರ್ನಾಟಕದಲ್ಲಿ ಲಾಕ್​ಡೌನ್ ಮುಂದುವರೆಯುವ ಬಗ್ಗೆ ನಿರ್ಧಾರವಾಗುವ ಸಾಧ್ಯತೆಯಿದೆ.


ಇದನ್ನೂ ಓದಿ : Corona Vaccine ವಿಷಯದಲ್ಲೂ ಗುಜರಾತ್-ಕರ್ನಾಟಕ ನಡುವೆ ತಾರತಮ್ಯವೇ? ಎಚ್ ಡಿಕೆ ಪ್ರಶ್ನೆ


ಈಗಾಗಲೇ ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್(K Sudhakar), ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಸೇರಿದಂತೆ ಬಿಜೆಪಿ ಪಕ್ಷದ ಕೆಲವು ನಾಯಕರೇ ಬಹಿರಂಗವಾಗಿ ಲಾಕ್​ಡೌನ್ ಪ್ರಸ್ತಾಪವನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಹೀಗಾಗಿ, ಈ ಬಗ್ಗೆ ಗಂಭೀರವಾಗಿ ಯೋಚನೆ ಮಾಡುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಸಂಜೆ ಕೋವಿಡ್ ಉಸ್ತುವಾರಿ ಸಚಿವರು, ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಇಂದು ಸಂಜೆ 6 ಗಂಟೆಗೆ ಕಾವೇರಿ ನಿವಾಸದಲ್ಲಿ ಲಾಕ್​ಡೌನ್ ಸೇರಿದಂತೆ ಇನ್ನಷ್ಟು ಮುಖ್ಯ ವಿಚಾರಗಳ ಬಗ್ಗೆ ಮಹತ್ವದ ಸಭೆ ನಡೆಯಲಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.