Lok Sabha Election 2024: ಬಳ್ಳಾರಿಯಲ್ಲಿ ದಾಖಲೆ ಇಲ್ಲದ ರೂ.23 ಲಕ್ಷ ನಗದು ಪೋಲೀಸರ ವಶಕ್ಕೆ
Lok Sabha Election 2024:ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಖಚಿತ ಮಾಹಿತಿ ಮೇರೆಗೆ ಎಫ್‍ಎಸ್‍ಟಿ ಮತ್ತು ಎಸ್‍ಎಸ್‍ಟಿ ತಂಡಗಳು ದಾಳಿ ನಡೆಸಿ, ಜಪ್ತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ
Lok Sabha Election 2024: ಬಳ್ಳಾರಿ: ನಗರದ ಬ್ರೂಸ್‍ಪೇಟೆ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಮಲೇಶ್ ಎನ್ನುವ ವ್ಯಕ್ತಿಯ ಮನೆಯಲ್ಲಿ ಸೂಕ್ತ ದಾಖಲೆಯಿಲ್ಲದ ರೂ.23 ಲಕ್ಷದ ನಗದನ್ನು ಬುಧವಾರ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದ್ದು, ಆದಾಯ ತೆರಿಗೆ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಖಚಿತ ಮಾಹಿತಿ ಮೇರೆಗೆ ಎಫ್‍ಎಸ್‍ಟಿ ಮತ್ತು ಎಸ್‍ಎಸ್‍ಟಿ ತಂಡಗಳು ದಾಳಿ ನಡೆಸಿ, ಜಪ್ತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಮುಸ್ಲಿಮರಿಗೆ ಒಬಿಸಿ, ದಲಿತರಿಗೆ ಅನ್ಯಾಯ: ಕಾಂಗ್ರೆಸ್ ವಿರುದ್ಧ ಸಚಿವ ಪ್ರಲ್ಹಾದ ಜೋಶಿ ಆರೋಪ
ಅದೇರೀತಿಯಾಗಿ ವಿವಿಧೆಡೆ ಅಬಕಾರಿ ಇಲಾಖೆ ಪೊಲೀಸ್ ಅಧಿಕಾರಿಗಳಿಂದ 30.06 ಲೀ. (ಅಂದಾಜು ರೂ.15,148 ಮೌಲ್ಯದ) ಮದ್ಯ ವಶಪಡಿಸಿಕೊಳ್ಳಲಾಗಿದೆ ಮತ್ತು 0.08 ಕೆ.ಜಿ (ಅಂದಾಜು ರೂ.1,400 ಮೌಲ್ಯದ) ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.