ಸಿವಿಲ್ ಎಂಜಿನಿಯರಿಂಗ್ ನಿಂದ ರಾಜಕಾರಣದವರೆಗೆ ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ನಡೆದು ಬಂದ ಹಾದಿ

Lok Sabha Election 2024: 2004ರಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡಿ ಶಾಸಕರಾಗಿದ್ದ ಬಾಲರಾಜು ಬಳಿಕ ನಡೆದ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದರೂ ಕೈ ಹಿಡಿದಿರಲಿಲ್ಲ. 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದ ಬಾಲರಾಜು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಗುರುರಿಸಿಕೊಂಡು ಕ್ಷೇತ್ರದಲ್ಲಿ ಓಡಾಟ ನಡೆಸಿದ್ದರು.

Written by - Yashaswini V | Last Updated : Mar 14, 2024, 10:38 AM IST
  • ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆಯಲು ಆಕಾಂಕ್ಷಿಗಳ ಸರತಿ ಸಾಲೆ ನಿರ್ಮಾಣವಾಗಿತ್ತು.
  • ಎಸ್.ಬಾಲರಾಜು, ಪ್ರಸಾದ್ ಅಳಿಯಂದಿರಾದ ಡಾ.ಮೋಹನ್, ಹರ್ಷವರ್ಧನ್, ದಿ.ಕೆ.ಶಿವರಾಂ, ಎಸ್.ಮಹಾದೇವಯ್ಯ, ವೆಂಕಟರಮಣಸ್ವಾಮಿ ಪಾಪು ಆಕಾಂಕ್ಷಿಗಳಾಗಿ ಗುರುತಿಸಿಕೊಂಡಿದ್ದರು.
ಸಿವಿಲ್ ಎಂಜಿನಿಯರಿಂಗ್ ನಿಂದ ರಾಜಕಾರಣದವರೆಗೆ ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ನಡೆದು ಬಂದ ಹಾದಿ  title=

Lok Sabha Election 2024: ಲೋಕಸಭಾ ಚುನಾವಣೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದ ಸಂಸದ ಶ್ರೀನಿವಾಸ ಪ್ರಸಾದ್ ಅಳಿಯಂದರಿಗೆ ಟಿಕೆಟ್ ಕೈ ತಪ್ಪಿದ್ದು ಮಾಜಿ ಶಾಸಕ ಎಸ್  ಬಾಲರಾಜು ಕಮಲಪಡೆ ಹುರಿಯಾಳಾಗಿದ್ದಾರೆ.

2004ರಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡಿ ಶಾಸಕರಾಗಿದ್ದ ಬಾಲರಾಜು ಬಳಿಕ ನಡೆದ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದರೂ ಕೈ ಹಿಡಿದಿರಲಿಲ್ಲ. 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದ ಬಾಲರಾಜು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಗುರುರಿಸಿಕೊಂಡು ಕ್ಷೇತ್ರದಲ್ಲಿ ಓಡಾಟ ನಡೆಸಿದ್ದರು.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಎಸ್. ಬಾಲರಾಜು ಬಿಜೆಪಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದು ಮೊದಲ ಬಾರಿಗೆ ಲೋಕಸಭಾ ಅಖಾಡಕ್ಕೆ ಇಳಿಯಲಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ  ಚಾಮರಾಜನಗರದಲ್ಲಿ ಮೊದಲ ಬಾರಿಗೆ ಪ್ರಸಾದ್ ಕಮಲ ಅರಳಿಸಿದ್ದರು.

ಇದನ್ನೂ ಓದಿ- Lok Sabha Election 2024: ಚುನಾವಣೆಗೂ ಮುನ್ನ ಆನ್‌ಲೈನ್‌ನಲ್ಲಿ ವೋಟರ್ ಐಡಿ ವಿಳಾಸವನ್ನು ಸುಲಭವಾಗಿ ಅಪ್ಡೇಟ್ ಮಾಡಿ

ಟಿಕೆಟ್ ಆಕಾಂಕ್ಷಿಗಳು ಯಾರ್ಯಾರಿದ್ದರು..? 
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆಯಲು ಆಕಾಂಕ್ಷಿಗಳ ಸರತಿ ಸಾಲೆ ನಿರ್ಮಾಣವಾಗಿತ್ತು. ಎಸ್.ಬಾಲರಾಜು, ಪ್ರಸಾದ್ ಅಳಿಯಂದಿರಾದ ಡಾ.ಮೋಹನ್, ಹರ್ಷವರ್ಧನ್, ದಿ.ಕೆ.ಶಿವರಾಂ, ಎಸ್.ಮಹಾದೇವಯ್ಯ, ವೆಂಕಟರಮಣಸ್ವಾಮಿ ಪಾಪು ಆಕಾಂಕ್ಷಿಗಳಾಗಿ ಗುರುತಿಸಿಕೊಂಡಿದ್ದರು.

ಸಿವಿಲ್ ಎಂಜಿನಿಯರಿಂಗ್ ನಿಂದ ರಾಜಕಾರಣದವರೆಗೆ ಚಾಮರಾಜನಗರ ಬಿಜೆಪಿ ಅಭ್ಯರ್ಥಿಯಾಗಿ ಎಸ್ ಬಾಲರಾಜು ನಡೆದು ಬಂದ ಹಾದಿ; 
>> ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ಎಸ್ ಬಾಲರಾಜು 1991 ರಲ್ಲಿ ಮುತ್ಸದಿ ರಾಜಕಾರಣಿ ಎಂ.ರಾಜಶೇಖರಮೂರ್ತಿ ಅವರ ಗರಡಿಯಿಂದ ಬಂದ ರಾಜಕಾರಣಿಯಾಗಿದ್ದಾರೆ.  
>> ರಾಜಶೇಖರಮೂರ್ತಿ ಶಿಷ್ಯನಾಗಿ ಕಾಂಗ್ರೆಸ್ ಮೂಲಕ ರಾಜಕೀಯಕ್ಕೆ ಬಂದು ವಿವಿಧ ಘಟಕಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 
>> ಅದಾದ ಬಳಿಕ, 1993 ರಲ್ಲಿ ಟಿಎಪಿಎಂಎಸ್ ನಿರ್ದೇಶಕರಾಗಿ ಆಯ್ಕೆಯಾಗಿ 1997 ರಲ್ಲಿ ಯುವ ಕಾಂಗ್ರೆಸ್ ಚಾಮರಾಜನಗರ ವಿಭಾಗದ ಅಧ್ಯಕ್ಷರಾದರು. 
>> 1999 ರಲ್ಲಿ ರಾಜಶೇಖರಮೂರ್ತಿ ಅವರೊಟ್ಟಿಗೆ ಬಿಜೆಪಿಗೆ ಸೇರ್ಪಡೆಗೊಂಡು ಕೊಳ್ಳೇಗಾಲ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 5421 ಮತಗಳಿಂದ ಸೋಲು ಕಂಡರು.
>> ಅದೇ ವರ್ಷ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. 
>> ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ-ಜೆಡಿಯು ಹೊಂದಾಣಿಕೆ ನಡುವೆ ಟಿಕೆಟ್ ಕೈ ತಪ್ಪಿದ್ದರಿಂದ 2004 ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಮೊದಲ ಬಾರಿಗೆ ಶಾಸಕರಾದರು.
>> 2013 ರಲ್ಲಿ ಯಡಿಯೂರಪ್ಪ ಅವರನ್ನು ಹಿಂಬಾಲಿಸಿ ಕೆಜೆಪಿ ಸೇರಿದ ಬಾಲರಾಜು ಮತ್ತೇ ಚುನಾವಣೆಗೆ ನಿಂತು ಮೂರನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು.
>> 2013 ರಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
>> 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಹೊರಬಂದು ಬಿಜೆಪಿ ಸೇರ್ಪಡೆಗೊಂಡು ಎನ್.ಮಹೇಶ್ ಪರ ಪ್ರಚಾರ ನಡೆಸಿದ್ದರು.
>> ವಿಧಾನಸಭಾ ಚುನಾವಣೆಯಾದ ಬಳಿಕ ಲೋಕಸಭಾ ಟಿಕೆಟ್ ನ ಪ್ರಬಲ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ್ದ ಬಾಲರಾಜು ಅವರಿಗೆ ಹೈಕಮಾಂಡ್ ಒಲವು ತೋರಿ ಟಿಕೆಟ್ ಕೊಟ್ಟಿದೆ.

ಇದನ್ನೂ ಓದಿ- Electoral Bonds: ಎಸ್‌ಬಿಐನ ಎಲೆಕ್ಟೋರಲ್ ಬಾಂಡ್ ಡೇಟಾದಿಂದ ಯಾವ ಮಾಹಿತಿ ಲಭ್ಯವಾಗುತ್ತೆ?

ಸದ್ಯ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮೋದಿ ಅಲೆ- ಸಿದ್ದು ಹವಾ ಎರಡೂ ಇದ್ದು ಮತದಾರ ಯಾರಿಗೆ ಮಣೆ ಹಾಕುತ್ತಾನೆಂದು ಕಾದು ನೋಡಬೇಕಿದೆ‌.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News