ಪಕ್ಷದ ನಾಯಕರ-ಜನರ ಪ್ರೀತಿ, ವಿಶ್ವಾಸಕ್ಕೆ ಚಿರಋಣಿ, 3 ಲಕ್ಷ ಮತಗಳ ಅಂತರದಿಂದ ಗೆಲ್ಲುವ ನಂಬಿಕೆಯಿದೆ: ಸಚಿವ ಪ್ರಹ್ಲಾದ ಜೋಶಿ

Lok Sabha Election 2024: ಕಳೆದೆರಡು ದಶಕಗಳಿಂದ ಧಾರವಾಡದ ಲೋಕಸಭಾ ಕ್ಷೇತ್ರದ ಜನರ ಪ್ರೀತಿ, ಆಶೀರ್ವಾದ ಮತ್ತು ಪಕ್ಷ ನಿಷ್ಠೆಗೆ ಪೂರಕವಾಗಿ ಸರ್ವ ರೀತಿಯ ಕೆಲಸ ಮಾಡುತ್ತಾ ಬಂದಿರುವ ನನಗೆ (ಪ್ರಹ್ಲಾದ್ ಜೋಷಿ) ಪಕ್ಷದ ಹೈಕಮಾಂಡ್ ಮತ್ತೊಂದು ಅವಕಾಶ ನೀಡಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವ ಮೂಲಕ ಅಭಿವೃದ್ಧಿ ಹೊಣೆಗಾರಿಕೆಯನ್ನು ನೀಡಿದೆ ಎಂದವರು ತಿಳಿಸಿದರು. 

Written by - Yashaswini V | Last Updated : Mar 14, 2024, 12:01 PM IST
  • ಎಲ್ಲರಿಗೂ ಟಿಕೆಟ್ ಕೇಳೋ ಅಧಿಕಾರ ಇದೆ.
  • ಶೆಟ್ಟರ್ ಅವರು ನನಗೆ ಟಿಕೆಟ್ ತಪ್ಪಿಸುವ ಪ್ರಯತ್ನ ಮಾಡಿಲ್ಲ. ನಾನು ಅವರನ್ನ ಟೀಕೆ ಮಾಡಲ್ಲ.
  • ಕಾಂಗ್ರೆಸ್ ಅಭ್ಯರ್ಥಿ ಯಾರೇ ಆಗಲಿ ನಾನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ನಾಯಕರ-ಜನರ ಪ್ರೀತಿ, ವಿಶ್ವಾಸಕ್ಕೆ ಚಿರಋಣಿ, 3 ಲಕ್ಷ ಮತಗಳ ಅಂತರದಿಂದ ಗೆಲ್ಲುವ ನಂಬಿಕೆಯಿದೆ:  ಸಚಿವ ಪ್ರಹ್ಲಾದ ಜೋಶಿ title=

Dharwad Lok Sabha constituency bjp candidate Minister Prahlad Joshi: ದೇಶದ ಅತ್ಯುತ್ತಮ ನಾಯಕರಲ್ಲಿ ಒಬ್ಬರಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಒಟ್ಟು 72 ಲೋಕಸಭಾ ಕ್ಷೇತ್ರದ ಸ್ಧಾನಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ಅದರಲ್ಲಿ ಧಾರವಾಡ ಲೋಕಸಭಾ ಕ್ಷೇತ್ರ ಸಹ ಒಂದಾಗಿದೆ. ನನಗೆ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಿದ್ದು ಸಂತಸವಾಗಿದೆ ಎಂದು ಭಾರತೀಯ ಜನತಾ ಪಕ್ಷದ ಧಾರವಾಡ ಲೋಕಸಭಾ ಕ್ಷೇತ್ರದ ನೂತನ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಹೇಳಿದರು. 

ಲೋಕಸಭಾ ಚುನಾವಣೆ 2024ಕ್ಕೆ ಬಿಜೆಪಿ ಪಕ್ಷದಿಂದ ಎರಡನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಿದೆ. ಲೋಕಸಭಾ ಚುನಾವಣೆ ಟಿಕೆಟ್ ಪ್ರಕಟವಾಗುತ್ತಿದಂತೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಷಿ, ಈ ಸಂದರ್ಭದಲಿ ಗೃಹ ಮಂತ್ರಿ ಅಮಿತ ಶಾ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. 
 
ಧಾರವಾಡ ಲೋಕಸಭಾ ಕ್ಷೇತ್ರ: 

ಕಳೆದೆರಡು ದಶಕಗಳಿಂದ ಧಾರವಾಡದ ಲೋಕಸಭಾ ಕ್ಷೇತ್ರದ ಜನರ ಪ್ರೀತಿ, ಆಶೀರ್ವಾದ ಮತ್ತು ಪಕ್ಷ ನಿಷ್ಠೆಗೆ ಪೂರಕವಾಗಿ ಸರ್ವ ರೀತಿಯ ಕೆಲಸ ಮಾಡುತ್ತಾ ಬಂದಿರುವ ನನಗೆ (ಪ್ರಹ್ಲಾದ್ ಜೋಷಿ) ಪಕ್ಷದ ಹೈಕಮಾಂಡ್ ಮತ್ತೊಂದು ಅವಕಾಶ ನೀಡಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವ ಮೂಲಕ ಅಭಿವೃದ್ಧಿ ಹೊಣೆಗಾರಿಕೆಯನ್ನು ನೀಡಿದೆ ಎಂದವರು ತಿಳಿಸಿದರು. 

ಇದನ್ನೂ ಓದಿ- ಸಿವಿಲ್ ಎಂಜಿನಿಯರಿಂಗ್ ನಿಂದ ರಾಜಕಾರಣದವರೆಗೆ ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ನಡೆದು ಬಂದ ಹಾದಿ

3 ಲಕ್ಷ ಮತಗಳ ಅಂತರದಿಂದ ಗೆಲ್ಲುವ ನಂಬಿಕೆಯಿದೆ:  ಸಚಿವ ಪ್ರಹ್ಲಾದ ಜೋಶಿ!
ದೇಶದಲ್ಲಿ ಎನ್.ಡಿ.ಎ 400 ಸ್ಥಾನಗಳಲ್ಲಿ ಗೆಲ್ಲಲಿದ್ದು, ಧಾರವಾಡ ಲೋಕಸಭಾ ಕ್ಷೇತ್ರದಿಂದ ಕನಿಷ್ಠ ಮೂರು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ಟಿಕೆಟ್ ಘೋಷಣೆಯ ಬಳಿಕ ಹುಬ್ಬಳ್ಳಿಗೆ ಬಂದಿಳಿದ ಜೋಶಿ, ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ, ಸೋಲು-ಗೆಲುವಿನ ಲೆಕ್ಕಾಚಾರ ನೋಡಿಕೊಂಡು ಕೆಲವೆಡೆ ಬದಲಾವಣೆ ಆಗಿದೆ. ಇದು ಸಾಮಾನ್ಯ ಪ್ರಕ್ರಿಯೆ. ರಾಷ್ಟ್ರೀಯ ನಾಯಕರ ತೀರ್ಮಾನದಂತೆಯೇ ನಳಿನಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿದ್ದರು. ನಾವು ಯಾರ ಕೈಯನ್ನೂ ಬಿಡುವುದಿಲ್ಲ. ಅವರಿಗೆ ಬೇರೆ ಜವಾಬ್ದಾರಿ ಕೊಡಲಾಗುವುದು ಎಂದರು.

ಇದನ್ನೂ ಓದಿ- Lok Sabha Election 2024: ಚುನಾವಣೆಗೂ ಮುನ್ನ ಆನ್‌ಲೈನ್‌ನಲ್ಲಿ ವೋಟರ್ ಐಡಿ ವಿಳಾಸವನ್ನು ಸುಲಭವಾಗಿ ಅಪ್ಡೇಟ್ ಮಾಡಿ

ಕಾಂತೇಶ್ ಅವರಿಗೆ ಟಿಕೆಟ್ ತಪ್ಪಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಜೋಶಿ, ಅದು ರಾಷ್ಟ್ರೀಯ ನಾಯಕರ ತೀರ್ಮಾನ. ಎಲ್ಲಿ ಗೆಲುವಿದೆಯೋ ಅಲ್ಲಿ ಸ್ಪರ್ಧೆ ಇದ್ದೇ ಇರತ್ತದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಟಿಕೆಟ್ ಕೇಳುವ ಹಕ್ಕಿದೆ ಎಂದರು.

ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳೇ ಇಲ್ಲ. ಅಂತಹುದ್ದರಲ್ಲಿ  ಬಿಜೆಪಿಯಲ್ಲಿ ದೊಡ್ಡ ದಂಡೇ ಇದೆ. ಯದುವೀರ್ ಅವರನ್ನು ಮನವೊಲಿಸಿದ್ದು ಬಿ.ಎಸ್. ಯಡಿಯೂರಪ್ಪ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News