Lok Sabha Election 2024: ಬಿಜೆಪಿ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ-ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು ಎಂದು ಆಗ್ರಹಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Written by - Manjunath N | Last Updated : Mar 21, 2024, 05:52 PM IST
  • ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ.
  • ಸಾರ್ವಜನಿಕವಾಗಿ ಎದೆಯುಬ್ಬಿಸಿ ಏನೇ ಕೊಚ್ಚಿಕೊಂಡರೂ ಆಂತರ್ಯದಲ್ಲಿರುವ ಆತ್ಮಸಾಕ್ಷಿ ಸತ್ಯವನ್ನೇ ಹೇಳುತ್ತದೆ.
  • 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಾಯಲ್ಲಿ ಹೇಳಿಕೊಂಡರೂ ವಾಸ್ತವದ ಸ್ಥಿತಿ ಏನೆನ್ನುವುದು ನರೇಂದ್ರ ಮೋದಿಗೆ ಗೊತ್ತಿದೆ.
Lok Sabha Election 2024: ಬಿಜೆಪಿ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ-ಸಿಎಂ ಸಿದ್ದರಾಮಯ್ಯ title=

ಬೆಂಗಳೂರು: ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು ಎಂದು ಆಗ್ರಹಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶವಾಗಿದೆ. ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹವಾಗಿರುವ ಹಣ, ಅದರಲ್ಲಿರುವುದು ದೊಡ್ಡ ಉದ್ಯಮಪತಿಗಳದ್ದಲ್ಲ. ಹೀಗಿದ್ದರೂ ಯಾಕೆ ಇಂತಹ ಕ್ರಮ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ-ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಎಲ್‌ಪಿಜಿ ಸಿಲಿಂಡರ್ ಬೆಲೆ 2,000 ರೂ.ಗೆ ಏರಬಹುದು: ಪಶ್ಚಿಮ ಬಂಗಾಳ ಸಿಎಂ

ಚುನಾವಣಾ ಬಾಂಡ್ ಗಳ ಮೂಲಕ ಉದ್ಯಮಿಗಳಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿ ತಮ್ಮ ಖಾತೆಗೆ ತುಂಬಿಸಿಕೊಂಡಿರುವ ಭಾರತೀಯ ಜನತಾ ಪಕ್ಷದ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಆಯೋಗ ತಕ್ಷಣ ಇದನ್ನು ಗಮನಿಸಿ ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಅವರು ಮನವಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ. ಸಾರ್ವಜನಿಕವಾಗಿ ಎದೆಯುಬ್ಬಿಸಿ ಏನೇ ಕೊಚ್ಚಿಕೊಂಡರೂ ಆಂತರ್ಯದಲ್ಲಿರುವ ಆತ್ಮಸಾಕ್ಷಿ ಸತ್ಯವನ್ನೇ ಹೇಳುತ್ತದೆ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಾಯಲ್ಲಿ ಹೇಳಿಕೊಂಡರೂ ವಾಸ್ತವದ ಸ್ಥಿತಿ ಏನೆನ್ನುವುದು ನರೇಂದ್ರ ಮೋದಿಗೆ ಗೊತ್ತಿದೆ. ಈ ಭಯದ ಕಾರಣದಿಂದಲೇ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವ ಸೇಡಿನ ಕ್ರಮಕ್ಕೆ ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ-ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

“ಪ್ರಧಾನಿ ನರೇಂದ್ರ ಮೋದಿಯವರು ಒಂದು ಮುಖವಾಡ ಅಷ್ಟೆ, ಅದರ ಹಿಂದೆ ಸರ್ಕಾರವನ್ನು ಮುನ್ನಡೆಸುವ ಒಂದು “ದುಷ್ಟ ಶಕ್ತಿ’’ ಇದೆ ಎಂದು ನಮ್ಮ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಹೇಳಿರುವುದು ಸರಿಯಾಗಿದೆ. ಈ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News