Lok Sabha Election 2024: ಎರಡು ದಿನ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯ ಕಾರ್ಯಕಾರಿಣಿಯಲ್ಲಿ  ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಸಂಘಟನಾತ್ಮಕವಾಗಿ ಹಲವು ವಿಷಯಗಳು ಚರ್ಚೆಯಾದವು. ಆದರೆ, ಟಿಕೆಟ್ ಹಂಚಿಕೆ ವಿಚಾರವಾಗಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರು ಸ್ಪಷ್ಟಪಡಿಸಿದರು.


COMMERCIAL BREAK
SCROLL TO CONTINUE READING

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಲೋಕಸಭೆ ಚುನಾವಣೆಯನ್ನು ಯಾವ ರೀತಿಯಾಗಿ ಎದುರಿಸಬೇಕು. ಸಂಘಟನೆಯನ್ನು ಹೇಗೆ ಮಾಡಬೇಕು. ಕಾರ್ಯಕರ್ತರು ಯಾವ ರೀತಿ ಕೆಲಸ ಮಾಡಬೇಕು ಎಂಬುದರ ಬಗ್ಗೆ ಸುದೀರ್ಘವಾಗಿ ಚರ್ಚೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ, ರಾಜನ್ನಾಥ್ ಸಿಂಗ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಕಾರ್ಯಕರ್ತರಿಗೆ ಸಂಘಟನಾತ್ಮಕವಾಗಿ ಮಾರ್ಗದರ್ಶನ ನೀಡಿದರು ಎಂದು ತಿಳಿಸಿದರು.


ಇದನ್ನೂ ಓದಿ- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ : ಯಾರಾಗಲಿದ್ದಾರೆ ಬಿಜೆಪಿ ಅಭ್ಯರ್ಥಿ..?


ಕಾರ್ಯಕರ್ತರಲ್ಲಿ ಸಾಕಷ್ಟು ಹುರುಪಿದೆ. ಬಿಜೆಪಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ ಮುತ್ತು ಹಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ.  ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಕೂಡ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕಮಲನಾಥ್ ಹಾಗೂ ಅವರ ಪುತ್ರ ಕೂಡ ಕಾಂಗ್ರೆಸ್ ಗೆ ವಿದಾಯ ಹೇಳುತ್ತಿದ್ದಾರೆ.  ಇಂಡಿಯಾ ಒಕ್ಕೂಟ ಛಿದ್ರವಾಗಿದೆ. ಹೀಗಾಗಿ ಬಿಜೆಪಿ 370ಕ್ಕೂ ಅಧಿಕ ಸೀಟುಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಭಿಪ್ರಾಯ ವ್ಯಕ್ತಪಡಿಸಿದರು. 


ಲೋಕಸಭೆ ಚುನಾವಣೆ ಟಿಕೆಟ್ ವಿಚಾರವಾಗಿ ಮಾತನಾಡಿದ ಜಗದೀಶ್ ಶೆಟ್ಟರ್, ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇನೆ. ಜವಾಬ್ದಾರಿಯನ್ನ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಪುನರುಚ್ಛರಿಸಿದರು. ಅಲ್ಲದೆ, ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿ, ಹಣಕಾಸಿಗೆ ಸಂಬಂಧಪಟ್ಟ ಲೆಕ್ಕ ಪತ್ರಗಳನ್ನು ಸರಿಯಾಗಿ ಇಟ್ಟುಕೊಂಡರೆ ಹೆದರುವ ಪ್ರಮೇಯ ಬರುವುದಿಲ್ಲ.  ಸರಿಯಾದ ವಹಿವಾಟು ತೋರಿಸದೇ ಇದ್ದಲ್ಲಿ ನೋಟಿಸ್ ನೀಡುವ ಮತ್ತು ವಿಚಾರಣೆ ನಡೆಸುವ ಅಧಿಕಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಇರುತ್ತದೆ. ಹೀಗಾಗಿ ಈ ಪ್ರಕ್ರಿಯೆಯನ್ನು ರಾಜಕಾರಣಕ್ಕೆ ತಳಕು ಹಾಕಬಾರದು ಎಂದರು.


ಇದನ್ನೂ ಓದಿ- Rahul Gandhi: ವಯನಾಡ್ ಕ್ಷೇತ್ರದ ಮೇಲೆ CPI ಕಣ್ಣು! ಲೋಕ ಚುನಾವಣೆಯಲ್ಲಿ ರಾಹುಲ್ ಗಾಂಧಿಗೆ ಕುತ್ತುತರುತ್ತಾ ಮಿತ್ರಪಕ್ಷ?


ಶ್ರೀರಾಮ ಮಂದಿರ ನಿರ್ಮಾಣದ ವಿಚಾರವಾಗಿ ಸಂತೋಷ್ ಲಾಡ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ,  ಸುಪ್ರೀಂ ಕೋರ್ಟ್ ನಿರ್ದೇಶನದಂತೆಯೇ ಶ್ರೀ ರಾಮ ಮಂದಿರವನ್ನು ನಿರ್ಮಾಣ ಮಾಡಲಾಗಿದೆ. ಎಲ್ಲ ದಾಖಲೆಗಳನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾಗಿದೆ. ಅದರ ಪರಿಶೀಲನೆಯ ಬಳಿಕವೇ ಮಂದಿರ ನಿರ್ಮಾಣಕ್ಕೆ ಅಸ್ತು ಎಂದಿತ್ತು. ಹೀಗಿರುವಾಗ ನಿಗದಿತ ಜಾಗ ಬಿಟ್ಟು ಬೇರೆ ರಾಮಮಂದಿರ ನಿರ್ಮಿಸಲು ಹೇಗೆ ಸಾಧ್ಯ. ಒಂದು ವೇಳೆ ನಿರ್ಮಿಸಿದ್ದರು ಕಾಂಗ್ರೆಸ್ ಇಷ್ಟು ವರ್ಷ ಏಕೆ ಸುಮ್ಮನಿತ್ತು. ನ್ಯಾಯಾಲಯದ ಮೊರೆ ಹೋಗಬಹುದಿತ್ತಲ್ಲ ಎಂದು ಪ್ರಶ್ನಿಸಿದ ಜಗದೀಶ್ ಶೆಟ್ಟರ್,  ಸುಖಾ ಸುಮ್ಮನೆ ಜನರಲ್ಲಿ ಗೊಂದಲ ಮೂಡಿಸಬಾರದು ಎಂದು ಎಚ್ಚರಿಸಿದರು‌.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.