ಮತದಾನ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಆದೇಶ
Lok Sabha Election 2024: ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ ಹಾಗೂ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಧಾರವಾಡ ವಿಭಾಗದ ಹುಬ್ಬಳ್ಳಿಯ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧಾರವಾಡ: ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಮತದಾನ ದಿನ ಮೇ 7 ರಂದು ವೇತನ ಸಹಿತ ರಜೆ ನೀಡಲು ಕಾರ್ಮಿಕ ಅಧಿಕಾರಿಗಳು ಆದೇಶಿಸಿದ್ದಾರೆ.
ಇದನ್ನೂ ಓದಿ: ಮುಸ್ಲಿಂ ಮತಾಂಧವಾದಿಗಳಿಗೆ ಈ ಸರ್ಕಾರದಲ್ಲಿ ಬಹಳ ಗೌರವವಿದೆ : ಆರ್ ಅಶೋಕ್
ಧಾರವಾಡ ಲೋಕಸಭಾ ಮತಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮೇ 07 ರಂದು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ 1951 ರ ಪ್ರಜಾ ಪ್ರತಿನಿಧಿ ಕಾಯ್ದೆ ಸೆಕ್ಷನ್ 135(ಬಿ) ರಡಿ ಹಾಗೂ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬ ರಜಾ ದಿನಗಳು) ಕಾಯ್ದೆ 1963 ಕಲಂ 3-ಎ ರನ್ವಯ ಸಂವಿಧಾನಾತ್ಮಕ ಅಥವಾ ಶಾಸನಾತ್ಮಕ ಹಕ್ಕು ಆಗಿರುವ ಮತವನ್ನು ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು, ನಿಯೋಜಕರು ಮತದಾನ ದಿನವಾದ 7 ರಂದು ವೇತನ ಸಹಿತ ರಜೆ ನೀಡಬೇಕು.
ಇದನ್ನೂ ಓದಿ: ETA ಮಾಲ್ ಬಳಿ ಕಾರ್ ಪರಿಶೀಲಿಸಿದಾಗ 2 ಕೋಟಿ ಪತ್ತೆ
ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ ಹಾಗೂ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಧಾರವಾಡ ವಿಭಾಗದ ಹುಬ್ಬಳ್ಳಿಯ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.