Lok Sabha Election 2024: `ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಮಿತಿ ಶೇ 50 ಕ್ಕಿಂತಲೂ ಹೆಚ್ಚಳ`
Lok Sabha Election 2024: ಇಂದು ಶ್ರಮಿಕ ವರ್ಗದ ಜನರು ಸಂಭ್ರಮಿಸುವ ದಿನ. ನಮ್ಮ ಹಿಂದುಳಿದ ವರ್ಗದ ನಾಯಕರಾದ ಕೆ.ಜಿ ನಂಜುಂಡಿ ಅವರು ಮನೆಗೆ ಮರಳಿದ್ದಾರೆ. ಅವರಿಗೆ ನನ್ನ ಹೃತ್ಪೂರ್ವಕ ಸ್ವಾಗತ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರ ಪರವಾಗಿ ಸ್ವಾಗತ ಕೋರುತ್ತೇನೆ ಎಂದು ಅವರು ಪಕ್ಷಕ್ಕೆ ಬರಮಾಡಿಕೊಂಡರು.
ಬೆಂಗಳೂರು: ಜೂನ್ 4ರ ನಂತರ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದ ಬಳಿಕ ದೇಶದಲ್ಲಿ ಜಾತಿ ಗಣತಿ ಮಾಡಿ, ಸರ್ಕಾರಿ ಹುದ್ದೆಗಳನ್ನು ನೇಮಕ ಮಾಡಿ ಹಿಂದುಳಿದ ವರ್ಗಗಳ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದರ ಜತೆಗೆ ಕಾಂಗ್ರೆಸ್ ಸರ್ಕಾರ ಮೀಸಲಾತಿ ಮಿತಿಯನ್ನು 50%ಗಿಂತ ಹೆಚ್ಚಳ ಮಾಡಲಾಗುವುದು. ಆಮೂಲಕ ಎಲ್ಲಾ ಸಮುದಾಯಗಳಿಗೂ ಅಗತ್ಯ ನೆರವು ನೀಡಲಾಗುವುದು. ಈ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ.
ಅವರು ಕೆ.ಪಿ ನಂಜುಂಡಿ ಅವರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಇಂದು ಶ್ರಮಿಕ ವರ್ಗದ ಜನರು ಸಂಭ್ರಮಿಸುವ ದಿನ. ನಮ್ಮ ಹಿಂದುಳಿದ ವರ್ಗದ ನಾಯಕರಾದ ಕೆ.ಜಿ ನಂಜುಂಡಿ ಅವರು ಮನೆಗೆ ಮರಳಿದ್ದಾರೆ. ಅವರಿಗೆ ನನ್ನ ಹೃತ್ಪೂರ್ವಕ ಸ್ವಾಗತ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರ ಪರವಾಗಿ ಸ್ವಾಗತ ಕೋರುತ್ತೇನೆ ಎಂದು ಅವರು ಪಕ್ಷಕ್ಕೆ ಬರಮಾಡಿಕೊಂಡರು.
ಇದನ್ನೂ ಓದಿ: Lok Sabha Election 2024: "ಭಾರತದ ಯಾವ ಮೂಲೆಯಲ್ಲೂ ಮೋದಿ ಅಲೆ ಇಲ್ಲ ಎನ್ನುವುದು ಸಾಬೀತಾಗಿದೆ"
ಇಂದು ಭಾರತದ ಸಂವಿಧಾನ ದಾಳಿಗೊಳಗಾಗುತ್ತಿರುವ ಸಂದರ್ಭದಲ್ಲಿ ನಾವೆಲ್ಲರೂ ಒಂದಾಗಿ ಹೋರಾಟ ಮಾಡಬೇಕಾಗಿದೆ. ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ವ್ಯವಸ್ಥಿತವಾಗಿ ನಾಶ ಮಾಡಲಾಗುತ್ತಿದೆ. ಒಂದು ಕಡೆ ಬಿಜೆಪಿಯ ನಾಯಕರಾದ ಅನಂತ ಕುಮಾರ್ ಹೆಗಡೆ, ಅರುಣ್ ಗೋಯಲ್, ಲಲ್ಲು ಸಿಂಗ್, ಜ್ಯೋತಿ ಮಿರ್ಬೆನ್ ಅವರು ಬಹಿರಂಗವಾಗಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡಲಿದೆ ಎಂದು ಹೇಳುತ್ತಿದ್ದಾರೆ. ಈಗಾಗಲೇ ಭಾರತ ಸರ್ಕಾರದಲ್ಲಿ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದ ಅಧಿಕಾರಿಗಳು ಸರ್ಕಾರದ ಕಾರ್ಯದರ್ಶಿಯಾಗುತ್ತಿಲ್ಲ. ಜಂಟಿ ಕಾರ್ಯದರ್ಶಿಯಿಂದ ಉನ್ನತ ಸ್ಥಾನಗಳನ್ನು ಈ ಸಮುದಾಯದವರಿಗೆ ನೀಡುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ವಿಶ್ವಕರ್ಮ, ಈಡಿಗ ಸೇರಿದಂತೆ ನೂರಾರು ಹಿಂದುಳಿದ ವರ್ಗ ಎಲ್ಲಿ ಹೋಗಬೇಕು? ಇನ್ನು ಸಾರ್ವಜನಿಕ ಉದ್ದಿಮೆಗಳಲ್ಲಿ ಒಬಿಸಿ ಗಳಿಗೆ 27% ಮೀಸಲಾತಿ ನೀಡಲಾಗಿದ್ದು, ಈ ಉದ್ದಿಮೆಗಳನ್ನು ಖಾಸಗಿಕರಣ ಮಾಡುವ ಮೂಲಕ ಮೀಸಲಾತಿ ನಿರ್ಮೂಲನೆ ಮಾಡುತ್ತಿದ್ದಾರೆ ಎಂದು ಅವರು ಕಿಡಿ ಕಾರಿದರು.
ಇದನ್ನೂ ಓದಿ: Loksabha Election 2024: ಮತಗಟ್ಟೆ ಸಿಬ್ಬಂದಿಯ ಅಂತಿಮ ಹಂತದ ರ‍್ಯಾಂಡಮೈಸೇಷನ್
ಭಾರತ ಸರ್ಕಾರದಲ್ಲಿ ಕೇವಲ ಓರ್ವ ಒಬಿಸಿ ಸಮುದಾಯದ ಅಧಿಕಾರಿ ಕಾರ್ಯದರ್ಶಿ ಹುದ್ದೆಯಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಿಂದುಳಿದ ಸಮಾಜದವರ ರಕ್ಷಣೆ ಮಾಡಲು ಹೇಗೆ ಸಾಧ್ಯ? ಹಿಂದುಳಿದ ವರ್ಗಗಗಳ ಆದಾಯ ಮಿತಿಯನ್ನು ಪರಿಶೀಲನೆ ಮಾಡಿ ಹೆಚ್ಚಳ ಮಾಡಿಲ್ಲ. ಭಾರತ ಸರ್ಕಾರದ ವ್ಯಾಪ್ತಿಯಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇದ್ದು, ಇದರಲ್ಲಿ 8 ಲಕ್ಷಕ್ಕಿಂತ ಹೆಚ್ಚು ಹುದ್ದೆಗಳು ಹಿಂದುಳಿದ ವರ್ಗದವರಿಗೆ ಸೇರಬೇಕು ಎಂದು ಅವರು ವಿವರಿಸಿದರು.
ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಶೋಷಿತ, ಹಿಂದುಳಿದ ಸಮುದಾಯಗಳ ರಕ್ಷಣೆಗೆ ಮುಂದಾಗಬೇಕು. ನಂಜುಂಡಿ ಅವರು ಕೇವಲ ವಿಶ್ವಕರ್ಮ ಸಮಾಜ ಮಾತ್ರವಲ್ಲ ಹಿಂದುಳಿದ ವರ್ಗಗಳ ಧ್ವನಿಯಾಗಿದ್ದಾರೆ? ಪರಿಶ್ರಮದ ದೇವರು ವಿಶ್ವಕರ್ಮ ಆಗಿದ್ದಾರೆ. ಜಗತ್ತಿನಲ್ಲಿ ಪರಿಶ್ರಮ ಇಲ್ಲದೆ ಏನಾದರೂ ಸಾಧನೆ ಮಾಡಲು ಸಾಧ್ಯವೇ? ಎಂದು ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.