Lok Sabha Election 2024: ಉಮೇಶ್ ಜಾಧವ್ ವಿರುದ್ಧ ತಿರುಗಿ ಬಿದ್ದ ಕ್ಷೇತ್ರದ ಜನತೆ
Lok Sabha Election 2024: 58,000+ ಯುವಕರ ಭವಿಷ್ಯದ ಪಾಲಿಗೆ ಶಾಪವಾಗಿ ಪರಿಣಮಿಸಿ, PSI ನೇಮಕಾತಿಯಲ್ಲಿ ಹಗರಣ ನಡೆಸಿ, ಪರೀಕ್ಷೆಯಲ್ಲಿ ಅನೈತಿಕ ಚಟುವಟಿಕೆಗಳನ್ನು ನಡೆಸಿ ಈಗ ಜೈಲುಪಾಲಾಗಿರುವ RD ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು ಅವರಿಗೆ ತಿರುಗುಬಾಣವಾಗಿದೆ.
ಕಲಬುರ್ಗಿ : ಇಡೀ ರಾಜ್ಯದ ಯುವಕರ ಭವಿಷ್ಯವನ್ನೇ ಹಾಳು ಮಾಡಿದ್ದ ಕಿಡಿಗೇಡಿ ಬಿಜೆಪಿ ಸರ್ಕಾರದ ಕೃಪಾಪೋಷಿತ ಪಿ.ಎಸ್.ಐ ಹಗರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿ ಊಟೋಪಚಾರ ಮಾಡಿರುವುದು ಕಲಬುರ್ಗಿಯಲ್ಲಿ ಆಕ್ರೋಶದ ಕಟ್ಟೆಯನ್ನೇ ಒಡೆಸಿದೆ.
ಇದನ್ನೂ ಓದಿ: ಧಾರವಾಡ ಡಿಸಿ ಕಚೇರಿಗೆ ಬಂದ ವಿನೋದ್ ಅಸೂಟಿ
58,000+ ಯುವಕರ ಭವಿಷ್ಯದ ಪಾಲಿಗೆ ಶಾಪವಾಗಿ ಪರಿಣಮಿಸಿ, PSI ನೇಮಕಾತಿಯಲ್ಲಿ ಹಗರಣ ನಡೆಸಿ, ಪರೀಕ್ಷೆಯಲ್ಲಿ ಅನೈತಿಕ ಚಟುವಟಿಕೆಗಳನ್ನು ನಡೆಸಿ ಈಗ ಜೈಲುಪಾಲಾಗಿರುವ RD ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು ಅವರಿಗೆ ತಿರುಗುಬಾಣವಾಗಿದೆ.
ಇದನ್ನು ಓದಿ : ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತದೆ ಗೊತ್ತಾ ?
ಇತ್ತೀಚಿಗೆ ನಡೆದಿದ್ದ PSI ಮರುಪರೀಕ್ಷೆ ವೇಳೆ ಕೂಡ ಅಕ್ರಮ ಮಾಡಲು ಯತ್ನಿಸಿ ಸಿಕ್ಕಿಬಿದ್ದು ಜೈಲುಗಂಬಿ ಎಣಿಸುತ್ತಿರುವ RD ಪಾಟೀಲ್ ಮನೆಗೆ ಉಮೇಶ್ ಜಾಧವ್ ಭೇಟಿಯಾರುವುದನ್ನು ಸಮರ್ಥಸಿಕೊಳ್ಳುವುದು ಜಿಲ್ಲೆಯ ಬಿಜೆಪಿ ಕಾರ್ಯಕರ್ತರಿಗೂ ಬಿಸಿತುಪ್ಪವಾಗಿ ಪರಿಣಮಿಸಿದೆ.ಈ ಭೇಟಿ ಮೂಲಕ ಜನರಿಗೆ ಯಾವ ರೀತಿಯ ಸಂದೇಶ ನೀಡಲು ಬಿಜೆಪಿ ಸಂಸದ ಮುಂದಾಗಿದ್ದಾರೆ? ಎಂಬ ಪ್ರಶ್ನೆಗೆ ಜಿಲ್ಲೆಯ ಯಾವುದೇ ಬಿಜೆಪಿ ನಾಯಕರ ಬಳಿಯೂ ಉತ್ತರವಿಲ್ಲದಾಗಿದೆ.
ಅಘಜಲಪುರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ RD ಪಾಟೀಲ್ ಅನ್ನು ಉಮೇಶ್ ಜಾಧವ್ ತನ್ನ ಚುನಾವಣೆಯಲ್ಲಿ ಸಹಕರಿಸುವಂತೆ ಕೇಳಿಕೊಂಡಿದ್ದಾರೆ.ಇದು ಜಿಲ್ಲೆಯ ಜನರಲ್ಲಿ ಬಿಜೆಪಿ ಕುರಿತು ಈಗಾಗಲೇ ಮೂಡಿದ್ದ ತಿರಸ್ಕಾರ ಮನೋಭಾವವನ್ನು ದುಪ್ಪಟ್ಟು ಮಾಡಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.