Lok Sabha election 2024: ನಾಮಪತ್ರ ಸಲ್ಲಿಕೆ ಹಿನ್ನೆಲೆ, ಡಿ.ಸಿ. ಕಚೇರಿ ಸುತ್ತ ಅನಗತ್ಯ ಓಡಾಟ ನಿಷೇಧ
ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ನಡೆಯುವ ಚುನಾವಣೆಗೆ ಏಪ್ರಿಲ್ 12 ರಂದು ಚುನಾವಣಾ ಅಧಿಸೂಚನೆ ಹೊರಡಿಸಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ ಸಿ.ಆರ್.ಪಿ.ಸಿ ಕಾಯ್ದೆ-1973ರ ಕಲಂ 144ರನ್ವಯ ಸಾರ್ವಜನಿಕರ ಅನಗತ್ಯ ಓಡಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಕಲಬುರಗಿ: ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ನಡೆಯುವ ಚುನಾವಣೆಗೆ ಏಪ್ರಿಲ್ 12 ರಂದು ಚುನಾವಣಾ ಅಧಿಸೂಚನೆ ಹೊರಡಿಸಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ ಸಿ.ಆರ್.ಪಿ.ಸಿ ಕಾಯ್ದೆ-1973ರ ಕಲಂ 144ರನ್ವಯ ಸಾರ್ವಜನಿಕರ ಅನಗತ್ಯ ಓಡಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ್ರೆ ಎಲ್ಲ ಫಿನಿಷ್ ಆಗುತ್ತೆ ಯಾಕೆ?
ಏಪ್ರಿಲ್ 12 ರಿಂದ 19ರ ವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದ್ದು, ಏಪ್ರಿಲ್ 22ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಈ ಅವಧಿಯಲ್ಲಿ ಸಾರ್ವಜನಿಕರು ವಿನಾಕಾರಣ ಡಿ.ಸಿ. ಕಚೇರಿ ಸುತ್ತ ಓಡಾಟ ಮಾಡಬಾರದು ಮತ್ತು ಯಾವುದೇ ರೀತಿಯ ಘೋಷಣೆಗಳನ್ನು ಕೂಗುವುದನ್ನು ಸಹ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಸಂಜಯ ಪಾಟೀಲ ನೀಚತನದ ಹೇಳಿಕೆ ಬಿಜೆಪಿಯ ಹಿಡನ್ ಅಜೆಂಡಾ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿರುವ ಸರಕಾರಿ ಕಚೇರಿಯಲ್ಲಿ ಅಗತ್ಯ ಕೆಲಸವಿದ್ದರೆ ಮಾತ್ರ ಬೆಳಿಗ್ಗೆ 11 ಗಂಟೆಗಿಂತ ಮುಂಚೆ ಮತ್ತು ಮಧ್ಯಾಹ್ನ 3 ಗಂಟೆಯ ನಂತರ ಕಚೇರಿಗೆ ಭೇಟಿ ನೀಡಬಹುದಾಗಿದೆ. ಯಾವುದೇ ವ್ಯಕ್ತಿಯು ಅನುಮಾನಾಸ್ಪದವಾಗಿ ಓಡಾಡುವುದು ಕಂಡುಬಂದಲ್ಲಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿರುವ ಡಿ.ಸಿ ಅವರು, ಸಾರ್ವಜನಿಕರು ಈ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.