ಮೈಸೂರು, ಮಾರ್ಚ್ 24: ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದ್ದು, ಈ ಬಾರಿ ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು..
ಅವರು ಇಂದು ಮೈಸೂರಿನ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಕಗ್ಗಂಟಿಲ್ಲ
ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿ ಪಕ್ಷದವರ ಹಾಗೆ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಸುಳ್ಳು ಹೇಳುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಮೈಸೂರು , ಚಾಮರಾಜನಗರ ಕ್ಷೇತ್ರವನ್ನೂ ಸೇರಿಸಿದಂತೆ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದೆ ಎಂದರು.
ನಾವು ಬಿಜೆಪಿಯಂತೆ ಸುಳ್ಳು ಹೇಳುವುದಿಲ್ಲ
ಗ್ಯಾರಂಟಿಯೋಜನೆಗಳು ಕಾಂಗ್ರೆಸ್ ಪಕ್ಷದ ನೆರವಿಗೆ ಬರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ನಮ್ಮ ಸರ್ಕಾರ ನುಡಿದಂತೆ ನಡೆದಿದ್ದು, ಜನರಿಗೆ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲಾಗಿದೆ. ಗ್ಯಾರಂಟಿಗಳಿಗೆ ಈ ವರ್ಷ 36000 ಕೋಟಿ ಹಾಗೂ ಮುಂದಿನ ವರ್ಷ 52009 ಕೋಟಿ ರೂ.ಗಳನ್ನು ವೆಚ್ಚ ಮಾಡಲಿದ್ದೇವೆ. ಬಿಜೆಪಿಯವರಂತೆ ಸುಳ್ಳು ಹೇಳದೇ , ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದರು.
ರಾಜ್ಯದ ಜನ ಕಾಂಗ್ರೆಸ್ ಪಕ್ಷದ ಕೈ ಹಿಡಿಯಲಿದ್ದಾರೆ
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮಾಡಿರುವ ಸಾಧನೆಗಳ ಆಧಾರದ ಮೇಲೆ ಚುನಾವಣೆಯನ್ನು ಎದುರಿಸಲಿದ್ದು, ಜನತೆ ವಿಧಾನಸಭಾ ಚುನಾವಣೆಯಂತೆ ನಮ್ಮ ಪಕ್ಷದ ಕೈ ಹಿಡಿಯಲಿದ್ದಾರೆ. ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದೆ ಎಂದರು.
ರಾತ್ರಿ AC ಬಳಸುವಾಗ ಸೀಲಿಂಗ್ Fan ಹಾಕ್ತೀರಾ..? ತಪ್ಪದೇ ಈ ವಿಚಾರ ತಿಳಿದುಕೊಳ್ಳಿ
ಮೋದಿಯವರ ಹುಸಿ ಭರವಸೆ
ಶಕ್ತಿ ಯೋಜನೆ ಹೊರತುಪಡಿಸಿದರೆ ಯಾವುದೇ ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯೆ ನೀಡುತ್ತಾ, ಬಿಜೆಪಿಯವರು ನುಡಿದಂತೆ ನಡೆಯಲಿಲ್ಲ. 2018 ರಲ್ಲಿ ಬಿಜೆಪಿಯವರು ನೀಡಿದ 600 ಭರವಸೆಗಳಲ್ಲಿ ಶೇ. 10 ರಷ್ಟನ್ನೂ ಈಡೇರಿಸಲಿಲ್ಲ. ಪ್ರಧಾನಿ ಮೋದಿಯವರೂ ಕೂಡ ಜನರ ಖಾತೆಗಳಿಗೆ 15 ಲಕ್ಷ ರೂ.ಗಳಾಗಲಿ, 20 ಕೋಟಿ ಉದ್ಯೋಗವಾಗಲಿ, ರೈತರ ಆದಾಯ ದ್ವಿಗುಣಗೊಳಿಸುವ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಅಚ್ಛೇ ದಿನ್ ತರುವ ಭರವಸೆಯನ್ನು ಹುಸಿಗೊಳಿಸಿದ ಮೋದಿಯವರನ್ನು ಜನರು ಯಾಕೆ ನಂಬುತ್ತಾರೆ ಎಂದು ಸಿಎಂ ಪ್ರಶ್ನಿಸಿದರು.
ಜನರ ಅಭಿಪ್ರಾಯಕ್ಕೆ ಮನ್ನಣೆ
ಕುಟುಂಬ ರಾಜಕಾರಣವನ್ನು ವಿರೋಧಿಸುವ ಮುಖ್ಯಮಂತ್ರಿಗಳೇ ತಮ್ಮ ಸಚಿವರ ಕುಟುಂಬದವರಿಗೆ ಈ ಬಾರಿ ಟಿಕೆಟ್ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ, ಇದು ಕುಟುಂಬ ರಾಜಕಾರಣವಲ್ಲ. ಜನರು ಯಾವ ಅಭ್ಯರ್ಥಿಗೆ ಬೆಂಬಲ ಸೂಚಿಸಬಹುದೆಂಬ ಚಿಂತನೆಯ ಮೇಲೆ ಅವರನ್ನು ಆಯ್ಕೆ ಮಾಡಲಾಗಿದ್ದು, ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗಿದೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ