ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಪಕ್ಷವು ಕಾಂಗ್ರೆಸ್​ಗೆ ಬಿಟ್ಟುಕೊಟ್ಟಿದೆ. 


COMMERCIAL BREAK
SCROLL TO CONTINUE READING

ಬೆಂಗಳೂರು ಉತ್ತರ ಕ್ಷೇತ್ರಕ್ಕಾಗಿ ಜೆಡಿಎಸ್ ಬೇಡಿಕೆ ಇಟ್ಟಿರಲಿಲ್ಲ. ಆದರೆ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡರು ಆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕಾರಣಕ್ಕಾಗಿ ಐವರು ಕಾಂಗ್ರೆಸ್ ಶಾಸಕರಿದ್ದರೂ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿತ್ತು.


ಇದೀಗ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದು, ಬೆಂಗಳೂರು ಉತ್ತರದಿಂದ ಕಣಕ್ಕಿಳಿಸಲು ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ಜೆಡಿಎಸ್‌ ಪಾಳಯ ವಿಫಲಗೊಂಡ ಹಿನ್ನೆಲೆಯಲ್ಲಿ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ ಎನ್ನಲಾಗಿದೆ.


ಈ ಬಗ್ಗೆ ಫೇಸ್ ಬುಕ್ ನಲ್ಲಿ ತಿಳಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, "ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್​ಗೆ  ಬಿಟ್ಟು ಕೊಟ್ಟಿರುವುದಕ್ಕಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಧನ್ಯವಾದಗಳು. ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಪ್ರಜಾಪ್ರಭುತ್ವದನ್ನು ನೆಲೆಗೊಳಿಸಲಿದೆ" ಎಂದಿದ್ದಾರೆ.