ಮಂಡ್ಯ: ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಅಭ್ಯರ್ಥಿಯನ್ನಾಗಿ ನಿಖಿಲ್ ಕುಮಾರಸ್ವಾಮಿ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ.


COMMERCIAL BREAK
SCROLL TO CONTINUE READING

ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್​ನಲ್ಲಿ ಇಂದು ನಡೆದ ಜೆಡಿಎಸ್ ಬೃಹತ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಅಭ್ಯರ್ಥಿಯನ್ನಾಗಿ ನಿಖಿಲ್‌ ಕುಮಾರಸ್ವಾಮಿ ಹೆಸರನ್ನು ಘೋಷಿಸಿದರು. 


ನಾನು ಮಂಡ್ಯದ ಮನೆ ಮಗ, ನಿಮ್ಮ ಗುಲಾಮನಾಗಿ ಕೆಲಸ ಮಾಡಲು ನನಗೊಂದು ಅವಕಾಶ ಮಾಡಿಕೊಡಿ ಎಂದು ನಿಖಿಲ್ ಈ ವೇಳೆ ಮನವಿ ಮಾಡಿದರು.


ಮಂಡ್ಯ ನನಗೆ ರಾಜಕೀಯ ಜನ್ಮ ಕೊಟ್ಟಿದೆ:
ಈ ವೇಳೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮಂಡ್ಯ ನನಗೆ ರಾಜಕೀಯ ಜನ್ಮ ಕೊಟ್ಟ ಸ್ಥಾನ. ನನ್ನ ಕಷ್ಟದಲ್ಲಿ ಮಳವಳ್ಳಿಯ ಜನತೆ ನನಗೆ ಬೆನ್ನೆಲುಬಾಗಿ ನಿಂತರು ಎಂದು ನೆನೆದರು.