ಹುಬ್ಬಳ್ಳಿ: ಮೋದಿ, 'ಪ್ರಧಾನ ಮಂತ್ರಿ ಅಲ್ಲ. ಪ್ರಚಾರ  ಮಂತ್ರಿ' ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಗರಂ ಆದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜಕೀಯ ತೆವಲಿಗೋಸ್ಕರ ಪ್ರಧಾನಿ ಮೋದಿ ವಿರುದ್ಧ ಮಾತನಾಡುವುದನ್ನು ಬಿಡಬೇಕು ಎಂದು ಕಿಡಿ ಕಾರಿದರು.


COMMERCIAL BREAK
SCROLL TO CONTINUE READING

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ (Union Minister Prahlad Joshi), ನಿಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆ ಅವರ ಕಾಲದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ಎಂಬುದನ್ನು ಮೊದಲು ತಿಳಿದುಕೊಳ್ಳಿ. ಅವರು ರಾಷ್ಟ್ರೀಯ ಅಧ್ಯಕ್ಷರಾಗಲು ಏನ್ನೆಲ್ಲ ಮಾಡಿದ್ದಾರೆ ಎಂದು ತಿಳಿಸುಕೊಳ್ಳಲಿ ಎಂದು ಪಿಯಾಂಕ್ ಖರ್ಗೆ ಅವರಿಗೆ ಎಚ್ಚರಿಕೆ ನೀಡಿದರು.


ಇದನ್ನೂ ಓದಿ- ಎಷ್ಟೇ ಖರ್ಚಾದರೂ ಸರಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ


ಕಾಂಗ್ರೆಸ್, ಯಾವಾಗಲೆಲ್ಲ ರಾಹುಲ್ ಗಾಂಧಿ ಅವರನ್ನು ಲಾಂಚ್ ಮಾಡಿದ್ದಾರೋ ಆಗೆಲ್ಲ ನಮಗೆ ಹೆಚ್ಚಿನ ಬೆಂಬಲ ಸಿಕ್ಕಿದೆ. ರಾಹುಲ್ ಗಾಂಧಿ (Rahul Gandhi) ಎಂಬ ಪ್ರಾಡಕ್ಸ್ ಸರಿಯಿಲ್ಲ. ಹೀಗಾಗಿ ಅವರು ಅಧಿಕಾರಿಕ್ಕೆ ಬರುವುದೇ ಇಲ್ಲ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದಿದ್ದೆವು. ಈ ಬಾರಿ 375  ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಬಿ.ಕೆ. ಹರಿಪ್ರಸಾದ್ (B.K. Hariprasad) ಪೆನ್ ಡ್ರೈವ್ ಬಾಂಬ್ ವಿಚಾರವಾಗಿ ಮಾತನಾಡಿದ ಪ್ರಹ್ಲಾದ್ ಜೋಷಿ, ಕಾಂಗ್ರೆಸ್ ಏನೂ ಸರಿ ಇಲ್ಲ ಎಂಬುದಕ್ಕೆ ಇದು ಹೊಸ ಉದಾಹರಣೆ. ಸಿಎಂ ಮತ್ತು ಡಿಸಿಎಂ ನಡುವಿನ ತಿಕ್ಕಲಾಟ ದಿನದಿಂದ ದಿನಕ್ಕೆ ತೀವ್ರವಾಗಿ ಹೆಚ್ಚುತ್ತಿದೆ. ಹೀಗಾಗಿ ಆಗಾಗ ಕೆಲವರು ಅಸಮಾಧಾನ ಹೊರ ಹಾಕುವುದು ಸಹಜ ಎಂದರು. 


ಇದನ್ನೂ ಓದಿ- Exclusive: "ಪ್ರಜಾಪ್ರಭುತ್ವ ಅಪಾಯದಲ್ಲಿದೆ" ರಾಗಾ ಹೇಳಿಕೆಗೆ ಕೌಂಟರ್; 25 ರಾಷ್ಟ್ರಗಳ ರಾಜಕೀಯ ಪಕ್ಷಗಳಿಗೆ ಚುನಾವಣೆ ವೀಕ್ಷಿಸಲು ಬಿಜೆಪಿ ಆಮಂತ್ರಣ


ಏ.15 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ಧಾರವಾಡದ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮೆರವಣಿಗೆಯ ಮೂಲಕ ಸಾಗಿ ನಾಮಪತ್ರ ಸಲ್ಲಿಸಲಿದ್ದೇನೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಲಿದ್ದಾರೆ. ಪ್ರಚಾರಕ್ಕೆ ಯಾವೆಲ್ಲ ನಾಯಕರು ಬರಲಿದ್ದಾರೆ ಎಂಬುದು ಇನ್ನೂ ಅಂತಿಮಗೊಂಡಿಲ್ಲ. ಇನ್ನೆರಡು ದಿನದಲ್ಲಿ ಎಲ್ಲವೂ ತಿಳಿಯಲಿದೆ ಎಂದರು.
 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.