ಬೆಂಗಳೂರು : ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿದ ಪ್ರಕರಣದ ಕುರಿತು ಕೂಲಂಕಷ ತನಿಖೆಗೆ ಆದೇಶಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಗಾಯಗೊಂಡು ಚಿಕಿತ್ಸೆಗಾಗಿ ಮಲ್ಯ ಆಸ್ಪತ್ರೆಗೆ ದಾಖಲಾಗಿರುವ ವಿಶ್ವನಾಥ್ ಶೆಟ್ಟಿಯವರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಇದು ನಿಜವಾಗಿಯೂ ಕೊಲೆ ಪ್ರಯತ್ನ. ಈಗಾಗಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.


ಮುಂದುವರೆದು ಮಾತನಾಡಿದ ಅವರು, ಈ ರೀತಿಯ ಘಟನೆ ಹಿಂದೆಂದೂ ನಡೆದಿರಲಿಲ್ಲ. ಪೋಲಿಸ್ ಮಹಾನಿರ್ದೇಶಕರಿಗೆ ಹೆಚ್ಚಿನ ತನಿಖೆಗೆ ಆದೇಶಿಸಲಾಗಿದೆ. ಲೋಕಾಯುಕ್ತ ಕಚೇರಿಯಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಆ ಎಲ್ಲಾ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಲಿದ್ದಾರೆ ಎಂದು ಹೇಳಿದರಲ್ಲದೆ, ವಿಶ್ವನಾಥ ಶೆಟ್ಟಿ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಸಿದ್ದರಾಮಯ್ಯ ಹಾರೈಸಿದರು.


ಬೆಂಗಳೂರಿನ lokayukta ಕಚೇರಿಯಲ್ಲಿ ಇಂದು (ಮಾ.7) ಬೆಳಿಗ್ಗೆ ತೇಜ್ ರಾಜ್ ಎಂಬ ವ್ಯಕ್ತಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರನ್ನು ಮೂರು ಬಾರಿ ಚಾಕುವಿನಿಂದ ಇರಿದು ಗಾಯಗೊಳಿಸಿದ್ದ. ಪ್ರಸ್ತುತ ನ್ಯಾಯಮೂರ್ತಿ ವಿಶ್ವನಾಥ್ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಮಲ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.