ಬೆಂಗಳೂರು:  ಸಾರ್ವಜನಿಕರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಸಾಲು-ಸಾಲು ದೂರು ಬಂದ ಹಿನ್ನೆಲೆ ಬೆಂಗಳೂರು ನಗರ ಹಾಗೂ ಗ್ರಾಮಾಂತರದ ಸರ್ಕಾರಿ ಆಸ್ಪತ್ರೆಗಳಲ್ಲಿ‌ ಲೋಕಾಯುಕ್ತ ಪರಿಶೀಲನೆ ನಡೆದಿದೆ. 10 ತಂಡಗಳು ಪ್ರತ್ಯೇಕವಾಗಿ ಸರ್ಕಾರಿ ಆಸ್ಪತ್ರೆಗಳ ಮೇಲೆ‌ ಭೇಟಿ ನೀಡಿ.


COMMERCIAL BREAK
SCROLL TO CONTINUE READING

ಚಿಕಿತ್ಸೆ ವಿಳಂಬ, ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ, ರೋಗಿಗಳ ಜೊತೆ ಅನುಚಿತ ವರ್ತನೆ, ಅವಧಿ‌ ಮೀರಿದ ಔಷಧಿ ವಿತರಣೆ ಕುರಿತು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಲೋಕಾಯುಕ್ತ ಬಿ.ಎಸ್.ಪಾಟೀಲ್ ಅಧಿಕಾರಿಗಳ ಮುಖಾಂತರ ಗೌಪ್ಯ ತನಿಖೆ ನಡೆಸಿ ಮಾಹಿತಿ ಸಂಗ್ರಹಿಸಿ, ಅಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಖಾತ್ರಿಪಡಿಸಿಕೊಂಡಿಕೊಂಡಿದ್ದರು.


ಇದನ್ನೂ ಓದಿ: ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ ನಾಯಕರ ಪ್ರತಿಭಟನೆ


ಹೀಗಾಗಿ ಇಂದು ಸಾರ್ವಜನಿಕ ಆಸ್ಪತ್ರೆಗಳಾದ ನೆಲಮಂಗಲ, ಯಲಹಂಕ, ಕೆ.ಆರ್. ಪುರ, ಜಯನಗರ, ಕೆ.ಸಿ. ಜನರಲ್ ಆಸ್ಪತ್ರೆ, ಸಂಜಯ್ ಗಾಂಧಿ ಆಸ್ಪತ್ರೆ, ಇಂದಿರಾಗಾಂಧಿ ಆಸ್ಪತ್ರೆ, ರಾಜೀವ್ ಗಾಂಧಿ ಆಸ್ಪತ್ರೆ, ಗೌಸಿಯಾ ಆಸ್ಪತ್ರೆ ಹಾಗೂ ವಾಣಿವಿಲಾಸ್ ಆಸ್ಪತ್ರೆಗಳಿಗೆ ಏಕಕಾಲದಲ್ಲಿ ಭೇಟಿ ನೀಡಿ  ರೋಗಿಗಳಿಗೆ ಸಿಗುತ್ತಿರುವ ಚಿಕಿತ್ಸೆ,ಸೌಲಭ್ಯದಲ್ಲಿ ಯಾರಾದರೂ ಅಕ್ರಮವೆಸಗುತ್ತಿದ್ದಾರಾ ಎಂದು ರೋಗಿಗಳಿಂದಲೇ ಮಾಹಿತಿ ಪಡೆದರು.


ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಕೆ.ಸಿ. ಜನರಲ್ ಆಸ್ಪತ್ರೆ, ಐಜಿಪಿ ಸುಬ್ರಮಣ್ಯೇಶ್ವರಾವ್  ವಾಣಿ ವಿಲಾಸ್ ಹಾಗೂ ಸಂಜಯ್ ಗಾಂಧಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.