Lokayukta raids in Haveri: ಡಿಡಿಪಿಐ, ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ!

Lokayukta raids in Haveri: ಡಿಡಿಪಿಐ ಕಚೇರಿಯಲ್ಲಿ ಶುಕ್ರವಾರ ನಿವೃತ್ತ ಶಿಕ್ಷಕರಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ (DDPI) ಹಾಗೂ ಕಚೇರಿಯ ಸಿಬ್ಬಂದಿ ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

Written by - Zee Kannada News Desk | Last Updated : Jul 21, 2023, 10:59 PM IST
  • ರೆಡ್‍ಹ್ಯಾಂಡ್‍ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ ಮತ್ತು ಕೇಸ್ ವರ್ಕರ್
  • ಹಾವೇರಿಯಲ್ಲಿ ನಿವೃತ್ತ ಶಿಕ್ಷಕನಿಂದ ಲಂಚ ಪಡೆಯುತ್ತಿದ್ದ ಇಬ್ಬರು ವಶಕ್ಕೆ
  • ನಿವೃತ್ತಿ ವೇತನ ಸೌಲಭ್ಯ ಪಡೆಯಲು 7 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಟ್ರ್ಯಾಪ್
Lokayukta raids in Haveri: ಡಿಡಿಪಿಐ, ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ! title=
ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ & ಕೇಸ್ ವರ್ಕರ್!

ಹಾವೇರಿ: ನಿವೃತ್ತ ಶಿಕ್ಷಕನಿಂದ ಲಂಚ ಪಡೆಯುತ್ತಿದ್ದಾಗ ಡಿಡಿಪಿಐ ಮತ್ತು ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹಾವೇರಿಯಲ್ಲಿ ಶುಕ್ರವಾರ ನಡೆದಿದೆ.

ಡಿಡಿಪಿಐ ಕಚೇರಿಯಲ್ಲಿ ಶುಕ್ರವಾರ ನಿವೃತ್ತ ಶಿಕ್ಷಕರಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ (DDPI) ಹಾಗೂ ಕಚೇರಿಯ ಸಿಬ್ಬಂದಿ ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್: ಕಾಂಗ್ರೆಸ್ ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಕಿಡಿ

ಡಿಡಿಪಿಐ ಅಂದಾನಪ್ಪ ವಡಗೇರಿ ಮತ್ತು ದ್ವಿತೀಯ ದರ್ಜೆ ಸಹಾಯಕ ದತ್ತಾತ್ರೇಯ ಕುಂಟೆ ರೆಡ್‍ಹ್ಯಾಂಡ್‍ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ರಟ್ಟೀಹಳ್ಳಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಮಹಮ್ಮದ್ ಗೌಸ್ ಎಂಬವರು ತಮ್ಮ ನಿವೃತ್ತಿ ವೇತನ ಸೌಲಭ್ಯ ಪಡೆಯಲು ಅಗತ್ಯ ದಾಖಲಾತಿಗಳನ್ನು ನೀಡಿ ಅದನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸಲು ಕೋರಿದ್ದರು.

ಇದಕ್ಕಾಗಿ ಡಿಡಿಪಿಐ 7 ಸಾವಿರ ರೂ. ಲಂಚ ಕೇಳಿದ್ದರು. ಈ ಕುರಿತು ಗೌಸ್ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ಶುಕ್ರವಾರ 7 ಸಾವಿರ ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದಾರೆ.

ಇದನ್ನೂ ಓದಿ: Nandini Milk Price Hike: ನಂದಿನಿ ಹಾಲಿನ ದರ ಲೀಟರ್‌ಗೆ 3 ರೂ. ಏರಿಕೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News