ಬೆಳಗಾವಿ: ಜಮೀನು ಖಾತೆ ಬದಲಾವಣೆ ಮಾಡಿಕೊಡಲು ಕಿತ್ತೂರು ತಹಶೀಲ್ದಾರ ಮತ್ತು ಕೇಸ್ ವರ್ಕರ್ 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇನ್ನು ಅದನ್ನು ಸ್ವೀಕರಿಸುತ್ತಿದ್ದಾಗ ತಹಶೀಲ್ದಾರ್ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮದ್ಯದ ನಶೆಯಲ್ಲಿ ವಿದ್ಯಾರ್ಥಿಗಳನ್ನು ಮನಸೋ ಇಚ್ಛೆ ಥಳಿಸಿದ ಭೂಪ


ಬೆಳಗಾವಿ ಜಿಲ್ಲೆಯ ಕಿತ್ತೂರು ತಹಶೀಲ್ದಾರ ಸೋಮಲಿಂಗಪ್ಪ ಹಲಗಿ ಹಾಗೂ ಕೇಸ್ ವರ್ಕರ್ ಪ್ರಸನ್ನ ಜಿ ಎಂಬ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದವರು.


ಕಿತ್ತೂರು ತಾಲೂಕಿನ ಖೊದಾನಪೂರ ಗ್ರಾಮದ ಬಾಪುಸಾಹೇಬ ಇನಾಮದಾರ ಎಂಬುವವರು ತಮ್ಮ 10ಎಕರೆ ಜಮೀನಿನ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕಿತ್ತೂರು ತಹಶೀಲ್ದಾರ್ 5 ಲಕ್ಷ ರೂ.ಗಳ ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ  ಬಾಪುಸಾಹೇಬ್ ಪುತ್ರ ರಾಜೇಂದ್ರ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದರು. ದೂರು ಸ್ವೀಕರಿಸಿದ ಲೋಕಾಯುಕ್ತ ಅಧಿಕಾರಿಗಳು ಕಿತ್ತೂರು ತಹಶೀಲ್ದಾರ ಮನೆಯಲ್ಲಿಯೇ ಜಮೀನಿನ ಖಾತೆ ಬದಲಾವಣೆ ಮಾಡಲು 2ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಎರಡು ಲಕ್ಷ ಹಣ ಮತ್ತು ಶ್ಯೂರಿಟಿಗಾಗಿ 20 ಲಕ್ಷ ಮೌಲ್ಯದ ಖಾಲಿ ಚೆಕ್ ಅನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: ಗೂಡ್ಸ್ ವಾಹನ ಸಂಚಾರ ನಿರ್ಬಂಧ : ಹೆಬ್ಬಾಳದಲ್ಲಿ ಕಡಿಮೆಯಾಯ್ತು ಟ್ರಾಫಿಕ್ ಜಾಮ್


ಕಾರ್ಯಾಚರಣೆ ವೇಳೆ ಲೋಕಾಯುಕ್ತ ಬೆಳಗಾವಿ ಎಸ್ಪಿ ಯಶೋಧಾ ವಂಟಗೂಡಿ ಮಾರ್ಗದರ್ಶನದಲ್ಲಿ ತನಿಖಾಧಿಕಾರಿಯಾಗಿ ಅಪೂರ್ಣ ಹುಲಗೂರ ತಂಡದ ಸಿಬ್ಬಂದಿಗಳು ಭಾಗಿಯಾಗಿದ್ದಾರೆ‌.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.