ಲೋಕಸಭಾ ಚುನಾವಣೆ ಸೀಟು ಹಂಚಿಕೆ: 20-8 ಸೂತ್ರಕ್ಕೆ ಕಾಂಗ್ರೆಸ್-ಜೆಡಿಎಸ್ ಅಸ್ತು

ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಕಗ್ಗಂಟಾಗಿ ಉಳಿದಿದ್ದ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ವಿಚಾರ ಕೊನೆಗೂ ಇತ್ಯರ್ಥಗೊಂಡಿದೆ ಎಂದು ತಿಳಿದುಬಂದಿದೆ.

Last Updated : Mar 13, 2019, 08:30 PM IST
ಲೋಕಸಭಾ ಚುನಾವಣೆ ಸೀಟು ಹಂಚಿಕೆ: 20-8 ಸೂತ್ರಕ್ಕೆ ಕಾಂಗ್ರೆಸ್-ಜೆಡಿಎಸ್ ಅಸ್ತು title=

ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಕಗ್ಗಂಟಾಗಿ ಉಳಿದಿದ್ದ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ವಿಚಾರ ಕೊನೆಗೂ ಇತ್ಯರ್ಥಗೊಂಡಿದೆ ಎಂದು ತಿಳಿದುಬಂದಿದೆ.

ಸುದ್ದಿ ಮೂಲಗಳ ಪ್ರಕಾರ ಇಂದು ಜೆಡಿಎಸ್ ನ ಮಹಾಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬುಧುವಾರದಂದು ಸಂಜೆ 7ಗಂಟೆಗೆ ಕೇರಳದ ಕೊಚ್ಚಿನ್ ನಲ್ಲಿ ಭೇಟಿ ಮಾಡಿ ಕರ್ನಾಟಕದ ಲೋಕಸಭಾ ಕ್ಷೇತ್ರಗಳನ್ನು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿರುವ ಒಟ್ಟು 28 ಕ್ಷೇತ್ರಗಲ್ಲಿ ಕಾಂಗ್ರೆಸ್ ನ ಹೈಕಮಾಂಡ್  ಎಂಟು ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ನೀಡಲು ಒಪ್ಪಿಗೆ ನೀಡಿದೆ ಎನ್ನಲಾಗಿದೆ.ಮೈಸೂರು ಕ್ಷೇತ್ರವನ್ನು ಸಹಿತ ಬಿಟ್ಟುಕೊಡಬೇಕು ಎಂದು ಪಟ್ಟು ಹಿಡಿದಿದ್ದ ಜೆಡಿಎಸ್ ಬೇಡಿಕೆಗೆ ಕಾಂಗ್ರೆಸ್ ಹೈಕಮಾಂಡ್ ನಿರಾಕರಿಸಿದೆ ಎನ್ನಲಾಗಿದೆ. ಇನ್ನೊಂದೆಡೆಗೆ  ಮೈಸೂರು ಕ್ಷೇತ್ರ ಜೆಡಿಎಸ್ ಪಾಲಾಗದಿರುವುದಕ್ಕೆ ಹೈಕಮಾಂಡ್ ಮೇಲೆ ಸಿದ್ದರಾಮಯ್ಯ ಅವರು ಹೇರಿದ ಒತ್ತಡವೂ ಕಾರಣ ಎಂದು ಹೇಳಲಾಗುತ್ತಿದೆ.

ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ,ಚಿಕ್ಕಮಂಗಳೂರು, ಶಿವಮೊಗ್ಗ, ತುಮಕೂರು, ಹಾಸನ್ ,ಮಂಡ್ಯ ,ಬೆಂಗಳೂರು ಉತ್ತರ,ವಿಜಯಪುರ ಕ್ಷೇತ್ರಗಳು ಮಾತ್ರ ಜೆಡಿಎಸ್ ಪಾಲಾಗಿವೆ.ಇನ್ನುಳಿದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ ಎನ್ನಲಾಗಿದೆ. 
 

Trending News