Mandya Loksabha Constituency Congress candidate Venkataramane Gowda star Chandru: ಕಳೆದ ಬಾರಿಯಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಪ್ರತಿಷ್ಠಿತ ಕ್ಷೇತ್ರವಾಗಿ ಸದಾ ಸುದ್ದಿಯಲ್ಲಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಕಣಕ್ಕಿಳಿಸಲಾಗಿದೆ. ಸ್ಟಾರ್ ಚಂದ್ರು ಅವರು ಇಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾದರು. 


COMMERCIAL BREAK
SCROLL TO CONTINUE READING

ಬೆಂಗಳೂರಿನ ಸದಾಶಿವ ನಗರದಲ್ಲಿನ ಅವರ ನಿವಾಸದಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ (SM Krishna) ಅವರನ್ನು  ಭೇಟಿ ಮಾಡಿದ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (Venkataramane Gowda) (ಸ್ಟಾರ್ ಚಂದ್ರು) (Star Chandru) ಅವರು ಎಸ್. ಎಂ. ಕೃಷ್ಣ ಅವರ ಆಶೀರ್ವಾದ ಪಡೆದರು.


ಇದನ್ನೂ ಓದಿ- ಚಿಕ್ಕಬಳ್ಳಾಪುರ ಬಿಜೆಪಿ ಲೋಕಸಭಾ ಅಭ್ಯರ್ಥಿ ಡಾ. ಕೆ. ಸುಧಾಕರ್‌ ಎಷ್ಟು ಕೋಟಿ ಒಡೆಯ ಗೊತ್ತಾ?


ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ (Mandya District In-charge Minister N. Chaluvarayaswamy), ಶಾಸಕರಾದ ಗಣಿಗ ರವಿ, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಾಜಿ ಶಾಸಕರುಗಳಾದ ಕೆ.ಬಿ.ಚಂದ್ರಶೇಖರ್, ಹೊನ್ನಲಗೆರೆ ರಾಮಕೃಷ್ಣ, ಮಾಜಿ ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ ಅವರು ವೆಂಕಟರಮಣೇಗೌಡ (ಸ್ಟಾರ್ ಚಂದ್ರು)  ಅವರಿಗೆ ಸಾಥ್ ನೀಡಿದರು. 


ಇದನ್ನೂ ಓದಿ- "200 ಸ್ಥಾನ ಗೆಲ್ಲುವುದೂ ಕಷ್ಟ ಎನ್ನುವುದು ತಾನೇ ನಡೆಸಿದ ಆಂತರಿಕ ಸಮೀಕ್ಷೆಯಿಂದ BJP ಗೆ ಸ್ಪಷ್ಟ"


ಈ ವೇಳೆ ಎಸ್.ಎಂ.ಕೃಷ್ಣ ಅವರಿಗೆ ಹೂಮಾಲೆ ಹಾಕಿ, ಶಾಲು ಹೊದಿಸಿ ಸನ್ಮಾನಿಸಲಾಯಿತು.  ಉಭಯ ಕುಶಲೋಪರಿ ವಿಚಾರಿಸಿದ ನಾಯಕರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.