ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್‌ 26 ಅಂದರೆ ಶುಕ್ರವಾರ ನಡೆಯಲಿದೆ. ಹೀಗಾಗಿ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.


COMMERCIAL BREAK
SCROLL TO CONTINUE READING

ಇದೇ ಏಪ್ರಿಲ್ 26ರಂದು ಮೊದಲ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುಂಚಿತವಾಗಿ ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕಾಗಿದೆ. ಈ ಹಿನ್ನೆಲೆ ಬುಧವಾರ(ಏಪ್ರಿಲ್‌ 24) ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರಬೀಳಲಿದ್ದು, ಅಭ್ಯರ್ಥಿಗಳು ಮಾತ್ರ ಮನೆಮನೆ ಪ್ರಚಾರ ಮಾಡಬಹುದಾಗಿದೆ.


ಇದನ್ನೂ ಓದಿ: Lok Sabha Election 2024: "ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾಡಿಕೊಂಡ ಕಾಂಗ್ರೆಸ್..!"


ಮೊದಲ ಹಂತದಲ್ಲಿ ಈ ಕ್ಷೇತ್ರಗಳಲ್ಲಿ ಮತದಾನ


ರಾಜ್ಯದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.


2ನೇ ಹಂತದ ಮತದಾನ


ರಾಜ್ಯದ ಇನ್ನುಳಿದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಅಂದು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.


ದೇಶದ 543 ಸ್ಥಾನಗಳಿಗೆ ಏಳು ಹಂತಗಳಲ್ಲಿ ಚುನಾವಣೆ ನಡೆದರೆ, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ 2 ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 1ರಂದು ದೇಶದಲ್ಲಿ ಕೊನೆಯ ಹಂತದ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.


ಇದನ್ನೂ ಓದಿ: Lok Sabha Election 2024: "ಮುಂದಿನ ಐದು ವರ್ಷದವರೆಗೆ ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ ತೀರ್ಮಾನ ಮಾಡಿ"


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.