ನಷ್ಟದ ಸಹಕಾರಿ ಸಕ್ಕರೆ ಕಾರ್ಖಾನೆ ಖಾಸಗಿ ಗುತ್ತಿಗೆಗೆ :ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ
ಸಾಲ ಪಡೆದು ಪುನಶ್ಚೇತನಗೊಳಿಸುವ ಪ್ರಯತ್ನ ಮಾಡಿದರೆ ಸರ್ಕಾರ ನೆರವಿಗೆ ಬರಲಿದೆ ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಬೆಂಗಳೂರು : ಆರ್ಥಿಕ ಸಂಕಷ್ಟ ಹಾಗೂ ಇತರ ಆಡಳಿತಾತ್ಮಕ ಕಾರಣಗಳಿಂದ ಸ್ಥಗಿತಗೊಂಡಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಖಾಸಗಿಯವರಿಗೆ ಗುತ್ತಿಗೆ ಆಧಾರದ ಮೇಲೆ ನೀಡುವ ಮೂಲಕ ಪುನಶ್ಚೇತನಗೊಳಿಸುವುದು ಸರ್ಕಾರ ಉದ್ದೇಶವಾಗಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಾಬಾ ಸಾಹೇಬ್ ಪಾಟೀಲ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಆರ್ಥಿಕ ಸಂಕಷ್ಟದಲ್ಲಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಕಾರ್ಖಾನೆಗೆ ಸರ್ಕಾರದಿಂದ ಬಂಡವಾಳ ಅಥವಾ ಅನುದಾನ ನೀಡುವ ನೀತಿ ಸರ್ಕಾರದ ಮುಂದೆ ಇಲ್ಲ. ಸಾಲ ಪಡೆದು ಪುನಶ್ಚೇತನಗೊಳಿಸುವ ಪ್ರಯತ್ನ ಮಾಡಿದರೆ ಸರ್ಕಾರ ನೆರವಿಗೆ ಬರಲಿದೆ ಎಂದು ತಿಳಿಸಿದರು.
ಇದನ್ನೂ ಓದಿ : ಒಂದು ದೇಶ ಒಂದು ಚುನಾವಣೆ ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು: ಬಸವರಾಜ ಬೊಮ್ಮಾಯಿ
ಕಾರ್ಖಾನೆಯ ಕಾರ್ಯನಿರ್ವಹಣೆಗೆ ಅಗತ್ಯ ಸಂಪನ್ಮೂಲ ಕ್ರೋಢೀಕರಣ ಮಾಡುವುದು ಆಡಳಿತ ಮಂಡಳಿಯ ಜವಾಬ್ದಾರಿಯಾಗಿದ್ದು, ಸಾಮಾನ್ಯ ಸಭೆ ಮತ್ತು ಆಡಳಿತ ಮಂಡಳಿ ಸಭೆಗಳಲ್ಲಿ ಸೂಕ್ತ ತೀರ್ಮಾನ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ನಿಯಮಾನುಸಾರ ಪರಿಶೀಲನೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.