ಬೆಂಗಳೂರು: ಸಮ್ಮಿಶ್ರ ಸರ್ಕಾರ ಬಿಳುತ್ತೆ, ಹೆಚ್ಚು ಕಾಲ ಉಳಿಯುವುದಿಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ಸರ್ಕಾರ ಬೀಳುತ್ತೆ ಎಂಬ ಹೇಳಿಕೆ ನೀಡಿದ್ದಾರೆ. ಈಗಾಗಲೇ ಹಲವಾರು ಬಾರಿ ಆಪರೇಶನ್ ಗೆ ಒಳಗಾಗಿ ಕರ್ನಾಟಕದಲ್ಲಿ ಕಮಲ ಕೋಮಾದಲ್ಲಿದೆ, ಮತ್ತೆ ಆಪರೇಷನ್ ಕಮಲಕ್ಕೆ ಕೈಹಾಕುವ ಕೆಟ್ಟ ಸಾಹಸ ಮಾಡಬೇಡಿ. ವಿರೋಧ ಪಕ್ಷವಾಗಿ ಸದಾ ಬಿಜೆಪಿ ನಮ್ಮ ಮುಂದಿರಬೇಕು. ಇದೇ ಪ್ರಜಾಪ್ರಭುತ್ವದ ಸೌಂದರ್ಯ ಎಂದು ಹೇಳುವ ಮೂಲಕ ಯಡಿಯೂರಪ್ಪಗೆ ಟಾಂಗ್ ನೀಡಿದ್ದಾರೆ. 



ಪ್ರಸ್ತುತ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ರಾಜ್ಯದಲ್ಲಿ ಬಿಜೆಪಿ ಮುಂದೆಯೂ ಸಹ ವಿರೋಧ ಪಕ್ಷವಾಗಿಯೇ ಉಳಿಯಲಿದೆ ಎಂದಿದ್ದಾರೆ.