ಸಾಗರ: ಸಾಗರ ತಾಳಗುಪ್ಪ ಮಧ್ಯೆ ಮುಂಡಿಗೆಹಳ್ಳಿಯ ಬಳಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯೊಂದು ಸ್ಫೋಟಗೊಂಡಿದ್ದು, ಚಾಲಕ ಸಜೀವ ದಹನವಾಗಿರುವ ಧಾರುಣ ಘಟನೆ ಸಂಭವಿಸಿದೆ.


COMMERCIAL BREAK
SCROLL TO CONTINUE READING

ಸಾಗರದಿಂದ ಕಾರ್ಗಲ್ ಕಡೆಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಇಂಡಿಯನ್ ಗ್ಯಾಸ್ ಸಂಸ್ಥೆಗೆ ಸೇರಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದ್ದು, ರಭಸಕ್ಕೆ 20ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಈ ಅವಘಡದಲ್ಲಿ ಚಾಲಕ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ.


ಮುಂಜಾನೆ ನಾಲ್ಕೂವರೆ ಗಂಟೆ ವೇಳೆ ಈ ಘಟನೆ ಸಂಭವಿಸಿದ್ದು, ಲಾರಿ ಸಂಪೂರ್ಣವಾಗಿ ಭಸ್ಮವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಫೋಟದಿಂದಾಗಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ.