ಮಡಿಕೇರಿ: ರೆಸಾರ್ಟ್ ನಿರ್ಮಾಣಕ್ಕಾಗಿ ಕೆ.ನಿಡಗುಣಿ ಗ್ರಾಮದಲ್ಲಿ 800 ಮರಗಳ ಮಾರಣಹೋಮಕ್ಕೆ ಅನುಮತಿ ನೀಡಿದ್ದ ಮಡಿಕೇರಿ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಲ್.ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.


COMMERCIAL BREAK
SCROLL TO CONTINUE READING

ಶುಕ್ರವಾರ ಪ್ರಧಾನ ಅರಣ್ಯ ಸಂರಕ್ಷಣಾಧಿರಿಗಳು ಈ ಆದೇಶ ಹೊರಡಿಸಿದ್ದು, ವಿರಾಜಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರಿಗೆ ಮಡಿಕೇರಿ ವಲಯದ ಹೆಚ್ಚಿನ ಹೊಣೆ ನೀಡಲಾಗಿದೆ.


[[{"fid":"177862","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


800 ಮರಗಳನ್ನು ಕಡಿಯಲು ಅನುಮತಿ ನೀಡಿರುವ ಅರಣ್ಯ ಇಲಾಖೆ ವಿರುದ್ಧ ಪರಿಸರ ಪ್ರೇಮಿಗಳು ಮತ್ತು ಅಲ್ಲಿನ ಗ್ರಾಮಸ್ಥರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯ ಬೆಳಕಿಗೆ ಬಂದ ಕೂಡಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದ್ದರು. ಅದರನ್ವಯ ಈ ಪ್ರಕರಣದಲ್ಲಿ ಡಿಎಫ್ಒ ಕರ್ತವ್ಯ ಲೋಪ ಎಸಗಿರುವ ಬಗ್ಗೆ ತಿಳಿದುಬಂದಿದ್ದು, ಸೇವೆಯಿಂದ ಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.