ಮಹಾದಾಯಿ ವಿವಾದ: ಜನವರಿ 27ಕ್ಕೆ ಸರ್ವಪಕ್ಷ ಸಭೆ ಕರೆದ ಸಿಎಂ
ಮಹಾದಾಯಿ ನ್ಯಾಯಾಧೀಕರಣದಲ್ಲಿ ಫೆಬ್ರವರಿ 6 ರಿಂದ ಅಂತಿಮ ಹಂತದ ವಿಚಾರಣೆ ನಡೆಯಲಿದೆ.
ಬೆಂಗಳೂರು: ಮಹಾದಾಯಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಹಲವು ಬೆಳವಣಿಗೆಗಳು ನಡೆಯುತ್ತಿದೆ. ಮತ್ತೊಂದೆಡೆ ಆ ಭಾಗದ ರೈತರು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಹೀಗಾಗಿ ಮಹಾದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಜನವರಿ 27ಕ್ಕೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಪಕ್ಷ ಸಭೆ ಕರೆದಿದ್ದಾರೆ.
ಸರ್ವಪಕ್ಷ ಸಭೆಯಲ್ಲಿ ಮಹಾದಾಯಿ ವಿವಾದಕ್ಕೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳು, ನ್ಯಾಯಾಧೀಕರಣದಲ್ಲಿ ರಾಜ್ಯಾದ ಕಾನೂನು ಹೋರಾಟ ಹಾಗೂ ಮುಂದಿನ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುವುದು.
ಜೊತೆಗೆ, ಪ್ರಧಾನಿ ನರೇಂದ್ರ ಮೋದಿ ಅವರ ಬಳಿಗೆ ಮತ್ತೆ ಸರ್ವಪಕ್ಷ ನಾಯಕರನ್ನು ಕರೆದುಕೊಂಡು ಹೋಗುವುದು, ಸಂಸದರ ನಿಯೋಗ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ.