ಬೆಂಗಳೂರು: ಮಹಾದಾಯಿ ವಿಚಾರವಾಗಿ ಚರ್ಚಿಸಲು ಮಹಾದಾಯಿ ಹೋರಾಟಗಾರರು ಇಂದು ಮೈಸೂರಿಗೆ ತೆರಳಲಿದ್ದಾರೆ.


COMMERCIAL BREAK
SCROLL TO CONTINUE READING

ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಸಲುವಾಗಿ ಮೈಸೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನರನ್ನು ಭೇಟಿ ಮಾಡಿ ಚರ್ಚಿಸಲು ಬೆಂಗಳೂರಿನ ಕುಮಾರ ಕೃಪಾ ಅತಿಥಿಗೃಹದಿಂದ ಮೈಸೂರಿಗೆ ಐರಾವತ ಬಸ್ನಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಿದ್ದಾರೆ.


ಈ ಕುರಿತಾಗಿ ಅಶೋಕ ಪಟ್ಟಣ  ಮೈಸೂರಿಗೆ ಹೊರಡುವ ಮುಂಚೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಈಗಾಗಲೇ ಈ ಭೇಟಿಯ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಮಹಾದಾಯಿ ಹೋರಾಟಗಾರಿಗೆ ಸಂಜೆ 7.30 ಕ್ಕೆ ಮೈಸೂರಿನ ಸರ್ಕಿಟ್ ಹೌಸನಲ್ಲಿ  ಭೇಟಿ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.


ಜನವರಿ 7 ರಂದು ಗೋವಾದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಮತ್ತು ಪ್ರಧಾನಿ ಮೋದಿಯವರ ನಡುವೆ ಮಹಾದಾಯಿ ವಿಚಾರವಾಗಿ ಸಭೆ ನಡೆಯಲಿದೆ ಎಂದು ಸುದ್ದಿ ಹರಡಿತ್ತು, ಆದರೆ ಅದು ಯಾವುದು ಕೂಡ ನೆರವೇರಲಿಲ್ಲ. ಆದ್ದರಿಂದ ಈ ಸಮಸ್ಯೆಯನ್ನು ನಿವಾರಿಸಬೇಕಾದ ರೂಪುರೇಷೆಗಳೇನು ಮತ್ತು ಅದಕ್ಕೆ ರಾಜ್ಯ ಸರ್ಕಾರಿಂದ ಯಾವ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುವುದರ ಕುರಿತಾಗಿ ಮಹಾದಾಯಿ ಹೋರಾಟಗಾರರು ಇಂದು ಸಿದ್ದರಾಮಯ್ಯನವರ ಜೊತೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.