ಮಹಾದಾಯಿ ನದಿ ನೀರು ಹಂಚಿಕೆ : ರಾಜ್ಯಕ್ಕೆ ಸಿಹಿ ಸುದ್ದಿ, ಅಧಿಸೂಚನೆ ಹೊರಡಿಸಿದ ಕೇಂದ್ರ
ಬಹುದಿನಗಳ ಕನಸಾದ ಮಹದಾಯಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ್ ಮಹತ್ವದ ಆದೇಶದ ಅನ್ವಯ ಈಗ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿ ಪ್ರಕಟಣೆ ಮಾಡಿದೆ. ಆ ಮೂಲಕ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಾದಾಯಿ ವಿವಾದಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಕ್ಕಿದೆ ಎನ್ನಬಹುದು.
ನವದೆಹಲಿ: ಬಹುದಿನಗಳ ಕನಸಾದ ಮಹದಾಯಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ್ ಮಹತ್ವದ ಆದೇಶದ ಅನ್ವಯ ಈಗ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಆ ಮೂಲಕ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಾದಾಯಿ ವಿವಾದಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಕ್ಕಿದೆ ಎನ್ನಬಹುದು.
ಈಗ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವುದನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ "ಬಹು ನಿರೀಕ್ಷಿತ ಮಹಾದಾಯಿ ನದಿ ನೀರಿನ ಹಂಚಿಕೆಯ ಐತೀರ್ಪನ್ನು ಕೇಂದ್ರ ಸರ್ಕಾರ ಇಂದು ಗೆಝೆಟ್ ಪ್ರಕಟಣೆ ಹೊರಡಿಸಿದೆ. ನಿನ್ನೆ ಕೇಂದ್ರ ಜಲ ಶಕ್ತಿ ಸಚಿವರನ್ನು ನಾವು ಭೇಟಿ ಮಾಡಿ ಚರ್ಚೆ ನಡೆಸಿದ್ದೆವು, ಪ್ರಧಾನಿ ಪ್ರಧಾನಿ ಮೋದಿ ಹಾಗೂ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ವಂದನೆಗಳು' ಎಂದು 'ಟ್ವೀಟ್ ಮೂಲಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಇತ್ತೀಚಿಗಷ್ಟೇ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠವು ಮಧ್ಯಂತರ ಆದೇಶವನ್ನು ಅಂಗೀಕರಿಸಿತ್ತು. ಮಹದಾಯಿ ನದಿ ಜಲಾನಯನ ಪ್ರದೇಶದಿಂದ ಕರ್ನಾಟಕಕ್ಕೆ 13.42 ಟಿಎಂಸಿ ನೀರನ್ನು (ಖಾಲಿಯಾದ ಮಲಪ್ರಭಾ ನದಿ ಜಲಾನಯನ ಪ್ರದೇಶಕ್ಕೆ ತಿರುಗಿಸಲು 3.9 ಟಿಎಂಸಿ ಸೇರಿದಂತೆ) ಹಂಚಿಕೆ ಮಾಡಿ ಮಹಾದಾಯಿ ಜಲ ವಿವಾದ ನ್ಯಾಯಮಂಡಳಿ 2018 ರ ಆಗಸ್ಟ್ 14 ರಂದು ಆದೇಶ ಹೊರಡಿಸಿತ್ತು.
ನ್ಯಾಯಮಂಡಳಿಯ ಅಂತಿಮ ತೀರ್ಪಿನಲ್ಲಿ ಮಹಾರಾಷ್ಟ್ರಕ್ಕೆ 1.33 ಟಿಎಂಸಿ ನೀರು ಮತ್ತು ಗೋವಾಕ್ಕೆ 24 ಟಿಎಂಸಿ ನೀಡಲಾಯಿತು. ಯುಪಿಎ -2 ಸರ್ಕಾರ 2010 ರಲ್ಲಿ ಮಹಾದಾಯಿ ಜಲ ವಿವಾದಗಳ ನ್ಯಾಯಮಂಡಳಿಯನ್ನು ರಚಿಸಿತ್ತು. ಎರಡೂ ರಾಜ್ಯಗಳ ನಡುವೆ ಮಹಾದಾನದಿಯ ನೀರನ್ನು ಹಂಚಿಕೊಳ್ಳುವ ವಿಷಯದ ಬಗ್ಗೆ ನೆರೆಯ ಗೊವಾದೊಂದಿಗೆ ಈಗ ಕಾನೂನು ಸಂಘರ್ಷ ನಡೆದಿತ್ತು ,ಕಳಸಾ-ಬಂಡೂರಿ ನಾಲಾ ಯೋಜನೆಗಾಗಿ 7.56 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡುವಂತೆ ಕೋರಿ ಕರ್ನಾಟಕ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿತ್ತು.
ಅಂತರ ರಾಜ್ಯ ಮಹಾದಾಯಿ ನದಿಯಿಂದ 7.56 ಟಿಎಂಸಿಎಫ್ ನೀರನ್ನು ಬಳಸಿಕೊಳ್ಳುವ ಕಳಸಾ-ಬಂಡೂರಿ ನಾಲಾ (ತಿರುವು) ಯೋಜನೆ ಪ್ರಮುಖವಾಗಿ ಹುಬ್ಬಳ್ಳಿ-ಧಾರವಾಡ,ಬೆಳಗಾವಿ ಮತ್ತು ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಸರಬರಾಜಿಗೆ ನೆರವಾಗಲಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವ 7.56 ಟಿಎಂಸಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸಲು ಮಹಾದಾಯಿ ನದಿಯ ಉಪನದಿಗಳಾದ ಕಲಾಸಾ ಮತ್ತು ಬಂಡೂರಿಗಳಲ್ಲಿ ಬ್ಯಾರೇಜ್‌ಗಳನ್ನು ನಿರ್ಮಿಸುವುದು ಇದರಲ್ಲಿ ಸೇರಿದೆ.