ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಂದ ಇಂದು ಮಹಾಕುಂಭ ಮೇಳ ಉದ್ಘಾಟನೆ

ಅ.14 ರಂದು ಮಹಾ ಕುಂಭಮೇಳದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ರವರು ಉದ್ಘಾಟನೆಯನ್ನು ಮಾಡಲಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ ರವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ರೇಷ್ಮೆ, ಯುವಸಬಲೀಕರಣ ಹಾಗೂ ಕ್ರೀಡಾ  ಸಚಿವರಾದ ಡಾ. ನಾರಾಯಣಗೌಡ ರವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.   

Written by - Yashaswini V | Last Updated : Oct 14, 2022, 07:04 AM IST
  • ಅಕ್ಟೋಬರ್ 14 ರಂದು ಬೆಳಿಗ್ಗೆ 4 ಗಂಟೆಯಿಂದ ನೂತನ ವಿಗ್ರಹಕ್ಕೆ ಅಷ್ಟ ಬಂಧನ, ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ, ಕುಂಭಾಭಿಷೇಕ ಹಾಗೂ ಪೂಜಾ ಕೈಂಕರ್ಯ ನಡೆಯಲಿದೆ.
  • ಸಂಜೆ 6-30 ರಿಂದ 7 ಗಂಟೆವರೆಗೆ ವಾರಣಾಸಿಯ ಕಾಶಿಯ ಮಾದರಿಯಲ್ಲಿ ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ವಿಶೇಷ ಗಂಗಾರತಿ.
  • ಸಂಜೆ 7 ರಿಂದ 9:30 ವರೆಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಂದ ಇಂದು ಮಹಾಕುಂಭ ಮೇಳ ಉದ್ಘಾಟನೆ  title=
MahaKumbh Mela

ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನಲ್ಲಿ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ  ನಿನ್ನೆಯಿಂದ  (ಅಕ್ಟೋಬರ್ 13) ಆರಂಭವಾಗಿರುವ ಮಹಾಕುಂಭ ಮೇಳ ಕಾರ್ಯಕ್ರಮವನ್ನು ಇಂದು (ಅಕ್ಟೋಬರ್ 14) ಬೆಳಗ್ಗೆ 11 ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಉದ್ಘಾಟಿಸಲಿದ್ದಾರೆ. ಇಂದು ಸಂಜೆ ವಾರಣಾಸಿಯ ಕಾಶಿಯ ಮಾದರಿಯಲ್ಲಿ ಕಾವೇರಿ ನದಿಯ ತ್ರಿವೇಣಿ  ಸಂಗಮದಲ್ಲಿ ವಿಶೇಷ ಗಂಗಾರತಿ ಕೂಡ ನೆರವೇರಲಿದೆ.  ಮಹಾಕುಂಭ ಮೇಳದಲ್ಲಿ ಇಂದು ಏನೆಲ್ಲಾ ಕಾರ್ಯಕ್ರಮಗಳು ಜರುಗಲಿವೆ ಎಂಬ ಮಾಹಿತಿ ಇಲ್ಲಿದೆ.

ಅ.14 ರಂದು ಮಹಾ ಕುಂಭಮೇಳದ ಉದ್ಘಾಟನಾ ಕಾರ್ಯಕ್ರಮಗಳ ವಿವರ ಇಂತಿದೆ:
* ಅಕ್ಟೋಬರ್ 14 ರಂದು ಬೆಳಿಗ್ಗೆ 4 ಗಂಟೆಯಿಂದ ನೂತನ ವಿಗ್ರಹಕ್ಕೆ ಅಷ್ಟ ಬಂಧನ, ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ, ಕುಂಭಾಭಿಷೇಕ ಹಾಗೂ ಪೂಜಾ ಕೈಂಕರ್ಯ ನಡೆಯಲಿದೆ. 

* ಬೆಳಿಗ್ಗೆ 10.30 ರಿಂದ 11 ಗಂಟೆವರೆಗೆ ನೂತನ ಮಲೆ ಮಹದೇಶ್ವರ ಮೂರ್ತಿ ಪ್ರತಿಷ್ಠಾಪನೆ, ಮಹಾಮಂಗಳಾರತಿ 3 ಜ್ಯೋತಿಗಳಿಗೆ ಪೂಜಾ ಕೈಂಕರ್ಯ, ಕಾವೇರಿ ನದಿ ಪೂಜೆ ಬಾಗಿನ ಸಮರ್ಪಣೆ, ವಿವಿಧ ವಸ್ತು ಪ್ರದರ್ಶನ ಮಳಿಗೆಗಳ ಉದ್ಘಾಟನೆ ನಡೆಯಲಿದೆ.

* ಬೆಳಿಗ್ಗೆ 11 ರಿಂದ 2 ಗಂಟೆಯವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ವಿರೇಂದ್ರ ಹೆಗ್ಗಡೆ ಮತ್ತು ಸಾಧು-ಸಂತರರು ಹಾಗೂ ಗಣ್ಯ ಮಾನ್ಯರಿಂದ ಕುಂಭಮೇಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

* ಮಧ್ಯಾಹ್ನ 3 ರಿಂದ 4:30 ಗಂಟೆವರೆಗೆ ಶ್ರೀ ಮಳವಳ್ಳಿ ಮಹದೇವಸ್ವಾಮಿ ಮತ್ತು ತಂಡದವರಿಂದ ಜಾನಪದ ಗೀತೆ.

* ಸಂಜೆ 5 ರಿಂದ 6-30 ರವರೆಗೆ ಗಂಗಾವತಿ ಪ್ರಾಣೇಶ್ ಪ್ರೋ. ಕೃಷ್ಣೇಗೌಡ, ಹಿರೇಮಗಳೂರು ಕಣ್ಣನ್, ಸುಧಾಬರಗೂರುರವರಿಂದ ಹಾಸ್ಯ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.

* ಸಂಜೆ 6-30 ರಿಂದ 7 ಗಂಟೆವರೆಗೆ ವಾರಣಾಸಿಯ ಕಾಶಿಯ ಮಾದರಿಯಲ್ಲಿ ಕಾವೇರಿ ನದಿಯ ತ್ರಿವೇಣಿ  ಸಂಗಮದಲ್ಲಿ ವಿಶೇಷ ಗಂಗಾರತಿ. 

* ಸಂಜೆ 7 ರಿಂದ 7-30 ರವರೆಗೆ ವಿಶೇಷ ಲೇಸರ್ ಶೋ

* ಸಂಜೆ 7 ರಿಂದ 9:30 ವರೆಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.

ಇದನ್ನೂ ಓದಿ- ಸ್ಪೂರ್ತಿದಾಯಕ ನಾಯಕರಿಗೆ ಸ್ಪಿರಿಟ್ ಆಫ್ ಟೈ ಟ್ರೈಲ್ ಬ್ಲೇಜರ್ಸ್ ಪ್ರಶಸ್ತಿ ಪ್ರದಾನ

ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ,  ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷರು ಸ್ವಾಮಿ ಮುಕ್ತಿದಾನಂದ ಜೀ ಮಹಾರಾಜ್, ಕಾಗಿನೆಲೆ ಕನಕಗುರು ಪೀಠ ಶ್ರೀ ಶ್ರೀ ಶಿವಾನಂದಪುರಿ ಸ್ವಾಮೀಜಿ, ಬೇಬಿ ಮಠ ಮತ್ತು ಚಂದ್ರವನ ಆಶ್ರಮ ಶ್ರೀ ಶ್ರೀ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಶ್ರೀ ಮಲೆ ಮಹದೇಶ್ವರ ಬೆಟ್ಟ ಸುಕ್ಷೇತ್ರ ಶ್ರೀ ಸಾಲೂರು ಬೃಹನ್ಮಠ ಪೀಠಾಧ್ಯಕ್ಷರು ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರು ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ.

ಕಾರ್ಯಕ್ರಮವನ್ನು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ರವರು ಉದ್ಘಾಟನೆಯನ್ನು ಮಾಡಲಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ ರವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ರೇಷ್ಮೆ, ಯುವಸಬಲೀಕರಣ ಹಾಗೂ ಕ್ರೀಡಾ  ಸಚಿವರಾದ ಡಾ. ನಾರಾಯಣಗೌಡ ರವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್ ರವರು ಸಹ ಕಾರ್ಯಕ್ರಮದಲ್ಲಿ ಉಪಸ್ಥಿತಿಯನ್ನು ವಹಿಸಲಿದ್ದಾರೆ. ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಮಾಜಿ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಮತ್ತು ಚಾಮರಾಜನಗರ ಸಂಸದರಾದ ವಿ. ಶ್ರೀನಿವಾಸ್ ಪ್ರಸಾದ್ ರವರು ಆಗಮಿಸಲಿದ್ದಾರೆ.

ಇದನ್ನೂ ಓದಿ- Invest Karnataka: ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದಿಂದ ಸಾವಿರಾರು ಉದ್ಯೋಗ ಸೃಷ್ಟಿ

ಕಾರ್ಯಕ್ರಮದಲ್ಲಿ ಅಬಕಾರಿ ಮತ್ತು  ಜಿಲ್ಲಾ ಉಸ್ತುವಾರಿ ಸಚಿವರು ಕೆ ಗೋಪಾಲಯ್ಯ,   ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಉನ್ನತ ಶಿಕ್ಷಣ ಮತ್ತು ತಂತ್ರಜ್ಞಾನ ಕೌಶಲ್ಯ ಅಭಿವೃದ್ಧಿ ಸಚಿವರಾದ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಹಾಗೂ ಮುಜರಾಯಿ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅ. ಜೊಲ್ಲೆ ರವರು  ಘನ ಉಪಸ್ಥಿತಿ ವಹಿಸಲಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News