ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಭೇಟಿ ಸರಿಯಲ್ಲ : ಮಹಾ ಸರ್ಕಾರಕ್ಕೆ ಸಿಎಂ ಸಂದೇಶ ರವಾನೆ

ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

Written by - Prashobh Devanahalli | Edited by - Krishna N K | Last Updated : Dec 2, 2022, 05:31 PM IST
  • ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ
  • ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ಫ್ಯಾಕ್ಸ್ ಮೂಲಕ ಕಳುಹಿಸಲಾಗಿದೆ
  • ಮಹಾ ಸಚಿವರ ಬೆಳಗಾವಿ ಭೇಟಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಭೇಟಿ ಸರಿಯಲ್ಲ : ಮಹಾ ಸರ್ಕಾರಕ್ಕೆ ಸಿಎಂ ಸಂದೇಶ ರವಾನೆ title=

ಬೆಳಗಾವಿ : ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ರಾಮದುರ್ಗದ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಡಿಸೆಂಬರ್ 06 ರಂದು ಬೆಳಗಾವಿಗೆ ಮಹಾರಾಷ್ಟ್ರದ ಸಚಿವರು ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಈಗಾಗಲೇ ಹಿಂದೆ ಹಲವಾರು ಬಾರಿ ಈ ಪ್ರಯತ್ನಗಳಾದಾಗ ಕರ್ನಾಟಕ ಸರ್ಕಾರ ಏನು ಕ್ರಮ ಕೈಗೊಂಡಿತ್ತೋ ಅದೇ ಕ್ರಮವನ್ನು ನಾವು ತೆಗೆದುಕೊಳ್ಳುತ್ತೇವೆ ಎಂದರು. 

ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ಆಗ್ರಹಿಸಿ ಡಿ. 3ರಿಂದ ಎಎಪಿಯಿಂದ ಬೃಹತ್‌ ಸಹಿ ಸಂಗ್ರಹ ಅಭಿಯಾನ

ಕುಡಿಯುವ ನೀರಿನ ಯೋಜನೆ ಸಾಕಾರಗೊಳ್ಳಲಿ: ಕನ್ನಡ ಕುಲಬಾಂಧವರಿರುವ ಜತ್ ತಾಲ್ಲೂಕಿನವರು  ಹಲವಾರು ವರ್ಷಗಳಿಂದ  ನೀರಿಲ್ಲದೆ ಬಳಲುತ್ತಿದ್ದರು. ಅಂತಹುದರಲ್ಲಿ ಮಹಾರಾಷ್ಟ್ರ ನೀರಿನ ಯೋಜನೆ ರೂಪಿಸಿದೆ ಎಂದಿದ್ದಾರೆ. ಆ ಯೋಜನೆ ಸಾಕಾರಗೊಳ್ಳಲಿ. ಆ ಭಾಗದ ಜನರಿಗೆ ನೀರು ತಲುಪುವ ಕೆಲಸವಾಗಲಿ ಎಂದರು.

ಈ ಮೊದಲು ಡಿ3ರಂದು ಬೆಳಗಾವಿಗೆ ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ್‌ ಪಾಟೀಲ್‌ ಮತ್ತು ಶಂಭುರಾಜ ದೇಸಾಯಿ ಅವರು ಭೇಟಿ ನೀಡಲು ತಯಾರಿ ನಡೆಸಲಾಗಿತ್ತು. ಜಿಲ್ಲೆಗೆ ಭೇಟಿ ನೀಡುವಂತೆ ಎಂಇಎಸ್‌ ಮನವಿ ಮಾಡಿತ್ತು. ಇದೀಗ 6 ರಂದು ಕುಂದಾನಗರಿಗೆ ಮಹಾ ಸಚಿವರು ಬರಲು ನಿರ್ಧರಿಸಿದ್ದಾರೆ. ಅಲ್ಲದೆ, ಮಹಾರಾಷ್ಟ್ರ ಸಚಿವರ ಭೇಟಿಗೆ ಕರವೇ ವಿರೋಧ ವ್ಯಕ್ತಪಡಿಸಿದೆ. ಇನ್ನು ಸಿಎಂ ಬೊಮ್ಮಾಯಿ ಅವರು ಸಹ ಬೆಳಗಾವಿ ಭೇಟಿ ಸರಿಯಲ್ಲ ಎಂದಿದ್ದಾರೆ. ಮುಂದೇನಾಗುತ್ತೆ ಅಂತ ಕಾಯ್ದುನೋಡಬೇಕಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News