ಬೆಳಗಾವಿ : ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 


COMMERCIAL BREAK
SCROLL TO CONTINUE READING

ಅವರು ಇಂದು ರಾಮದುರ್ಗದ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಡಿಸೆಂಬರ್ 06 ರಂದು ಬೆಳಗಾವಿಗೆ ಮಹಾರಾಷ್ಟ್ರದ ಸಚಿವರು ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಈಗಾಗಲೇ ಹಿಂದೆ ಹಲವಾರು ಬಾರಿ ಈ ಪ್ರಯತ್ನಗಳಾದಾಗ ಕರ್ನಾಟಕ ಸರ್ಕಾರ ಏನು ಕ್ರಮ ಕೈಗೊಂಡಿತ್ತೋ ಅದೇ ಕ್ರಮವನ್ನು ನಾವು ತೆಗೆದುಕೊಳ್ಳುತ್ತೇವೆ ಎಂದರು. 


ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ಆಗ್ರಹಿಸಿ ಡಿ. 3ರಿಂದ ಎಎಪಿಯಿಂದ ಬೃಹತ್‌ ಸಹಿ ಸಂಗ್ರಹ ಅಭಿಯಾನ


ಕುಡಿಯುವ ನೀರಿನ ಯೋಜನೆ ಸಾಕಾರಗೊಳ್ಳಲಿ: ಕನ್ನಡ ಕುಲಬಾಂಧವರಿರುವ ಜತ್ ತಾಲ್ಲೂಕಿನವರು  ಹಲವಾರು ವರ್ಷಗಳಿಂದ  ನೀರಿಲ್ಲದೆ ಬಳಲುತ್ತಿದ್ದರು. ಅಂತಹುದರಲ್ಲಿ ಮಹಾರಾಷ್ಟ್ರ ನೀರಿನ ಯೋಜನೆ ರೂಪಿಸಿದೆ ಎಂದಿದ್ದಾರೆ. ಆ ಯೋಜನೆ ಸಾಕಾರಗೊಳ್ಳಲಿ. ಆ ಭಾಗದ ಜನರಿಗೆ ನೀರು ತಲುಪುವ ಕೆಲಸವಾಗಲಿ ಎಂದರು.


ಈ ಮೊದಲು ಡಿ3ರಂದು ಬೆಳಗಾವಿಗೆ ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ್‌ ಪಾಟೀಲ್‌ ಮತ್ತು ಶಂಭುರಾಜ ದೇಸಾಯಿ ಅವರು ಭೇಟಿ ನೀಡಲು ತಯಾರಿ ನಡೆಸಲಾಗಿತ್ತು. ಜಿಲ್ಲೆಗೆ ಭೇಟಿ ನೀಡುವಂತೆ ಎಂಇಎಸ್‌ ಮನವಿ ಮಾಡಿತ್ತು. ಇದೀಗ 6 ರಂದು ಕುಂದಾನಗರಿಗೆ ಮಹಾ ಸಚಿವರು ಬರಲು ನಿರ್ಧರಿಸಿದ್ದಾರೆ. ಅಲ್ಲದೆ, ಮಹಾರಾಷ್ಟ್ರ ಸಚಿವರ ಭೇಟಿಗೆ ಕರವೇ ವಿರೋಧ ವ್ಯಕ್ತಪಡಿಸಿದೆ. ಇನ್ನು ಸಿಎಂ ಬೊಮ್ಮಾಯಿ ಅವರು ಸಹ ಬೆಳಗಾವಿ ಭೇಟಿ ಸರಿಯಲ್ಲ ಎಂದಿದ್ದಾರೆ. ಮುಂದೇನಾಗುತ್ತೆ ಅಂತ ಕಾಯ್ದುನೋಡಬೇಕಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.