ಬೆಂಗಳೂರು: ಭಾರತದ ಮಾಜಿ ಪ್ರಧಾನಮಂತ್ರಿಗಳೂ, ಹಾಸನ ಲೋಕಸಭಾ  ಸದಸ್ಯರೂ ಆದ ಹೆಚ್.ಡಿ.ದೇವೇಗೌಡರನ್ನು ರಾಜ್ಯ ಸರ್ಕಾರ ಈ ಬಾರಿಯ ಪ್ರತಿಷ್ಠಿತ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಿದೆ. 


COMMERCIAL BREAK
SCROLL TO CONTINUE READING

ನಿವೃತ್ತ ನ್ಯಾಯಾಧೀಶ ರಾದ ನ್ಯಾ.ಹೆಚ್.ಎನ್.ನಾಗಮೋಹನ ದಾಸ್ ಸಮಿತಿ ಶಿಫಾರಸ್ಸು:
ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ನೇಮಿಸಿದ್ದ ಸಮಿತಿ ಶಿಫಾರಿಸಿನಂತೆ ಈ ಪ್ರಶಸ್ತಿಯನ್ನು ಹೆಚ್.ಡಿ.ದೇವೇಗೌಡ ಅವರಿಗೆ ನೀಡಿ ಗೌರವಿಸಲು ಸರ್ಕಾರ ಮಂಜೂರಾತಿ ನೀಡಿದೆ.


 


ದೇವೇಗೌಡರಿಗೆ ಆಹ್ವಾನ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ:
ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಇಂದು ಭೇಟಿ ನೀಡಿದ್ದ ಸಮಾಜ ಕಲ್ಯಾಣ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಹೆಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಆಗಮಿಸಿ, ಪ್ರಶಸ್ತಿ ಸ್ವೀಕರಿಸುವಂತೆ ಮನವಿ ಮಾಡಿದರು. 



ಕಾರ್ಯಕ್ರಮ ನಡೆಯುವ ಸ್ಥಳ:
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಅಕ್ಟೋಬರ್ 24 2018ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ನಡೆಯಲಿದ್ದು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೆಚ್.ಡಿ. ದೇವೇಗೌಡರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.