ಪೋಲಿಯೋ ನಿರ್ಮೂಲನೆ ಸ್ಥಿತಿಯನ್ನು ಕಾಯ್ದುಕೊಳ್ಳುವುದು ಮುಖ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರಿನಲ್ಲಿ ಇಂದು ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಪೋಲಿಯೋ ಲಸಿಕೆ ಹಾಕುವ ಅಭಿಯಾನದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಮೂಲಕ ಬೆಂಗಳೂರಿನಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದರು.

Written by - Prashobh Devanahalli | Edited by - Bhavishya Shetty | Last Updated : Mar 3, 2024, 02:13 PM IST
    • ಇಂದಿನಿಂದ ಮಾರ್ಚ್ 6ರವರೆಗೆ ಪೋಲಿಯೋ ಲಸಿಕಾ ಅಭಿಯಾನ
    • ತಪ್ಪದೇ ಲಸಿಕೆ ಹಾಕಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ
    • ಪಲ್ಸ್ ಪೋಲಿಯೋ ಹಾಕುವ ಮೂಲಕ ಬೆಂಗಳೂರಿನಲ್ಲಿ ಅಭಿಯಾನಕ್ಕೆ ಚಾಲನೆ
ಪೋಲಿಯೋ ನಿರ್ಮೂಲನೆ ಸ್ಥಿತಿಯನ್ನು ಕಾಯ್ದುಕೊಳ್ಳುವುದು ಮುಖ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ title=
Polio Vaccination Campaign

ಬೆಂಗಳೂರು: ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದನ್ನ ನಾವು ಮುಂದಿನ ದಿನಗಳಲ್ಲೂ ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಹೀಗಾಗಿ ಇಂದಿನಿಂದ ಮಾರ್ಚ್ 6ರವರೆಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ಪೋಲಿಯೋ ಲಸಿಕಾ ಅಭಿಯಾನದಲ್ಲಿ 5 ವರ್ಷದ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.‌

ಬೆಂಗಳೂರಿನಲ್ಲಿ ಇಂದು ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಪೋಲಿಯೋ ಲಸಿಕೆ ಹಾಕುವ ಅಭಿಯಾನದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಮೂಲಕ ಬೆಂಗಳೂರಿನಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರಾದ ನವೀನ್ ಭಟ್ ಪಾಲ್ಗೊಂಡಿದ್ದರು.

ಇದನ್ನೂ ಓದಿ: Virat- Anushka: ಮುರಿದು ಬೀಳುವತ್ತ 16 ವರ್ಷಗಳ ಅಪೂರ್ವ 'ಸಂಬಂಧ'! ಅಕಾಯ್ ಜನನದ ಬೆನ್ನಲ್ಲೇ ಅನುಷ್ಕಾ ಮಹತ್ವದ ನಿರ್ಧಾರ

Wild Polio Virus ನ ಪಸರಿಸುವಿಕೆಯು ಇಂದಿಗೂ ಜಗತ್ತಿನಾದ್ಯಂತ ಮಕ್ಕಳನ್ನು ಬಾಧಿಸುತ್ತಿದೆ. ಇದರಲ್ಲಿ ಭಾರತದ ನೆರೆ ರಾಷ್ಟ್ರಗಳೂ ಸೇರಿರುವುದು ಕಳವಳಕಾರಿಗಿದೆ. ಹೀಗಾಗಿ ಪೋಲಿಯೋ ನಿರ್ಮೂಲನೆ ಸ್ಥಿತಿಯನ್ನು ಭಾರತ ಕಾಯ್ದುಕೊಳ್ಳುಬೇಕಿದೆ.‌ India Expert Advisory Group (IEAG) ಶಿಫಾರಸ್ಸಿನ ಅನ್ವಯ 0-5 ವರ್ಷದೊಳಗಿನ ಎಲ್ಲಾ ಮಕ್ಕಳನ್ನು ವ್ಯಾಪ್ತಿಗೊಳಪಡಿಸಿದಂತೆ ರಾಷ್ಟ್ರೀಯ ಪೋಲಿಯೋ ಲಸಿಕಾ ಅಭಿಯಾನವನ್ನ ಮಾರ್ಚ್ 3 ರಿಂದ 6 ರ ವರೆಗೆ ಹಮ್ಮಿಕೊಳ್ಳಲಾಗಿದೆ.‌

ಮೊದಲನೇ ದಿನ ಮಾರ್ಚ್ 3 ರಂದು ಪೋಲಿಯೋ ಬೂತ್‌’ಗಳಲ್ಲಿ ಹಾಗೂ ನಂತರದ 2-3 ದಿನಗಳಲ್ಲಿ ಮನೆ-ಮನೆ ಭೇಟಿಯ ಮೂಲಕ 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ 2 ಹನಿ ಪೋಲಿಯೋ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ವಿಶೇಷವಾಗಿ ವಲಸಿಗ ಸಮುದಾಯದ, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳಲ್ಲಿನ ಹಾಗೂ ನಗರ ಪ್ರದೇಶದ ಸ್ಲಂಗಳಲ್ಲಿ ವಾಸಿಸುವ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ನಿರ್ದೇಶಕ ನವೀನ್ ಭಟ್ ತಿಳಿಸಿದ್ದಾರೆ.

ಪಿ-2 ವಿಧದ ಪೋಲಿಯೋ ಸೋಂಕು ಜಾಗತಿಕ ಮಟ್ಟದಲ್ಲಿ ನಿರ್ಮೂಲನೆಯಾಗಿದೆ.‌ ಪಿ-3 ಯ ಯಾವುದೇ ಪ್ರಕರಣಗಳು ವರದಿಯಾಗಿರುವುದಿಲ್ಲ. ಇದಕ್ಕೆ ಅಧಿಕೃತವಾಗಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಕ್ಟೋಬರ್ 2019 ರಲ್ಲಿ ಪ್ರಮಾಣಪತ್ರ ಪಡೆದಿದೆ. ಈಗ ಪಿ-1 ಪ್ರಕರಣಗಳು ಮಾತ್ರವೇ ವರದಿಯಾಗುತ್ತಿರುವುದು. ಜನವರಿ 13, 2011 ರಲ್ಲಿ ಪಶ್ಚಿಮ ಬಂಗಳಾದಲ್ಲಿ ಕೊನೆಯ ಪೋಲಿಯೋ ಪ್ರಕರಣವು ವರದಿಯಾಗಿತ್ತು. ಇದಾದ ಮೇಲೆ ಭಾರತದಲ್ಲಿ ಇಲ್ಲಿಯವರೆಗೂ ಯಾವುದೇ ಪೋಲಿಯೊ ಪ್ರಕರಣಗಳು ವರದಿಯಾಗಿರುವುದಿಲ್ಲ.

ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ನಿಯಮಿತವಾಗಿ ಪ್ರತಿ ಶಿಶುವಿಗೆ 5 ವರಸೆ ಒಪಿವಿ(ಓರಲ್ ಪೋಲಿಯೋ ವ್ಯಾಕ್ಸಿನ್) ಮತ್ತು 3 ವರಸೆ ಐಪಿವಿ(ಇನ್‌ಜಕ್ಟಬಲ್ ಪೋಲಿಯೊ ವ್ಯಾಕ್ಸಿನ್) ಲಸಿಕೆಗಳನ್ನು ನೀಡಲಾಗುತ್ತಿದೆ. ಯಾವುದೇ ಮಗುವು ಲಸಿಕೆಯಿಂದ ವಂಚಿತರಾಗದಂತೆ ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ಗುರಿ ಹೊಂದಲಾಗಿದೆ.

ಇದನ್ನೂ ಓದಿ: IPL ಆರಂಭಕ್ಕೂ ಮುನ್ನ SRHನಲ್ಲಿ ಬದಲಾವಣೆ! ನೂತನ ನಾಯಕನಾಗಿ ವಿಶ್ವಕಪ್ ಗೆದ್ದ ವೀರನಿಗೆ ‘ಪಟ್ಟ'

ಸುಮಾರು 3,3712 ಪೋಲಿಯೋ ಬೂತ್ ಗಳನ್ನ ತೆರೆಯಲಾಗಿದ್ದು, 1,11,370 ಲಸಿಕಾ ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ. 963 ಸಂಚಾರಿ ತಂಡಗಳನ್ನ ರಚಿಸಲಾಗಿದ್ದು, 7206 ಮೇಲ್ವಿಚಾರಕರನ್ನ ನಿಯೋಜಿಸಲಾಗಿದೆ. ಈ ಹಿಂದೆ ಎಷ್ಟು ಬಾರಿ ಪೋಲಿಯೋ ಲಸಿಕೆ ಪಡೆದಿದ್ದರೂ ಸಹ ಈ ಅಭಿಯಾನದಲ್ಲಿ ಮತ್ತೆ ಲಸಿಕೆ ಹಾಕಿಸುವುದು ಅವಶ್ಯಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಆರೋಗ್ಯ ಕೇಂದ್ರವನ್ನು ಭೇಟಿ ಮಾಡಿ ಅಥವಾ ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ.

ನಿಮ್ಮ ಹತ್ತಿರದ ಪೋಲಿಯೋ ಬೂತ್ ಅನ್ನು ಗುರುತಿಸಲು “Nearby Vaccination centre Karnataka " ಆಂಡ್ರಾಯ್ಡ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News