ಪೋಲಿಯೋ ನಿರ್ಮೂಲನೆ ಸ್ಥಿತಿಯನ್ನು ಕಾಯ್ದುಕೊಳ್ಳುವುದು ಮುಖ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರಿನಲ್ಲಿ ಇಂದು ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಪೋಲಿಯೋ ಲಸಿಕೆ ಹಾಕುವ ಅಭಿಯಾನದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಮೂಲಕ ಬೆಂಗಳೂರಿನಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದರು.
ಬೆಂಗಳೂರು: ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದನ್ನ ನಾವು ಮುಂದಿನ ದಿನಗಳಲ್ಲೂ ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಹೀಗಾಗಿ ಇಂದಿನಿಂದ ಮಾರ್ಚ್ 6ರವರೆಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ಪೋಲಿಯೋ ಲಸಿಕಾ ಅಭಿಯಾನದಲ್ಲಿ 5 ವರ್ಷದ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ಬೆಂಗಳೂರಿನಲ್ಲಿ ಇಂದು ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಪೋಲಿಯೋ ಲಸಿಕೆ ಹಾಕುವ ಅಭಿಯಾನದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಮೂಲಕ ಬೆಂಗಳೂರಿನಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರಾದ ನವೀನ್ ಭಟ್ ಪಾಲ್ಗೊಂಡಿದ್ದರು.
ಇದನ್ನೂ ಓದಿ: Virat- Anushka: ಮುರಿದು ಬೀಳುವತ್ತ 16 ವರ್ಷಗಳ ಅಪೂರ್ವ 'ಸಂಬಂಧ'! ಅಕಾಯ್ ಜನನದ ಬೆನ್ನಲ್ಲೇ ಅನುಷ್ಕಾ ಮಹತ್ವದ ನಿರ್ಧಾರ
Wild Polio Virus ನ ಪಸರಿಸುವಿಕೆಯು ಇಂದಿಗೂ ಜಗತ್ತಿನಾದ್ಯಂತ ಮಕ್ಕಳನ್ನು ಬಾಧಿಸುತ್ತಿದೆ. ಇದರಲ್ಲಿ ಭಾರತದ ನೆರೆ ರಾಷ್ಟ್ರಗಳೂ ಸೇರಿರುವುದು ಕಳವಳಕಾರಿಗಿದೆ. ಹೀಗಾಗಿ ಪೋಲಿಯೋ ನಿರ್ಮೂಲನೆ ಸ್ಥಿತಿಯನ್ನು ಭಾರತ ಕಾಯ್ದುಕೊಳ್ಳುಬೇಕಿದೆ. India Expert Advisory Group (IEAG) ಶಿಫಾರಸ್ಸಿನ ಅನ್ವಯ 0-5 ವರ್ಷದೊಳಗಿನ ಎಲ್ಲಾ ಮಕ್ಕಳನ್ನು ವ್ಯಾಪ್ತಿಗೊಳಪಡಿಸಿದಂತೆ ರಾಷ್ಟ್ರೀಯ ಪೋಲಿಯೋ ಲಸಿಕಾ ಅಭಿಯಾನವನ್ನ ಮಾರ್ಚ್ 3 ರಿಂದ 6 ರ ವರೆಗೆ ಹಮ್ಮಿಕೊಳ್ಳಲಾಗಿದೆ.
ಮೊದಲನೇ ದಿನ ಮಾರ್ಚ್ 3 ರಂದು ಪೋಲಿಯೋ ಬೂತ್’ಗಳಲ್ಲಿ ಹಾಗೂ ನಂತರದ 2-3 ದಿನಗಳಲ್ಲಿ ಮನೆ-ಮನೆ ಭೇಟಿಯ ಮೂಲಕ 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ 2 ಹನಿ ಪೋಲಿಯೋ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ವಿಶೇಷವಾಗಿ ವಲಸಿಗ ಸಮುದಾಯದ, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳಲ್ಲಿನ ಹಾಗೂ ನಗರ ಪ್ರದೇಶದ ಸ್ಲಂಗಳಲ್ಲಿ ವಾಸಿಸುವ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ನಿರ್ದೇಶಕ ನವೀನ್ ಭಟ್ ತಿಳಿಸಿದ್ದಾರೆ.
ಪಿ-2 ವಿಧದ ಪೋಲಿಯೋ ಸೋಂಕು ಜಾಗತಿಕ ಮಟ್ಟದಲ್ಲಿ ನಿರ್ಮೂಲನೆಯಾಗಿದೆ. ಪಿ-3 ಯ ಯಾವುದೇ ಪ್ರಕರಣಗಳು ವರದಿಯಾಗಿರುವುದಿಲ್ಲ. ಇದಕ್ಕೆ ಅಧಿಕೃತವಾಗಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಕ್ಟೋಬರ್ 2019 ರಲ್ಲಿ ಪ್ರಮಾಣಪತ್ರ ಪಡೆದಿದೆ. ಈಗ ಪಿ-1 ಪ್ರಕರಣಗಳು ಮಾತ್ರವೇ ವರದಿಯಾಗುತ್ತಿರುವುದು. ಜನವರಿ 13, 2011 ರಲ್ಲಿ ಪಶ್ಚಿಮ ಬಂಗಳಾದಲ್ಲಿ ಕೊನೆಯ ಪೋಲಿಯೋ ಪ್ರಕರಣವು ವರದಿಯಾಗಿತ್ತು. ಇದಾದ ಮೇಲೆ ಭಾರತದಲ್ಲಿ ಇಲ್ಲಿಯವರೆಗೂ ಯಾವುದೇ ಪೋಲಿಯೊ ಪ್ರಕರಣಗಳು ವರದಿಯಾಗಿರುವುದಿಲ್ಲ.
ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ನಿಯಮಿತವಾಗಿ ಪ್ರತಿ ಶಿಶುವಿಗೆ 5 ವರಸೆ ಒಪಿವಿ(ಓರಲ್ ಪೋಲಿಯೋ ವ್ಯಾಕ್ಸಿನ್) ಮತ್ತು 3 ವರಸೆ ಐಪಿವಿ(ಇನ್‌ಜಕ್ಟಬಲ್ ಪೋಲಿಯೊ ವ್ಯಾಕ್ಸಿನ್) ಲಸಿಕೆಗಳನ್ನು ನೀಡಲಾಗುತ್ತಿದೆ. ಯಾವುದೇ ಮಗುವು ಲಸಿಕೆಯಿಂದ ವಂಚಿತರಾಗದಂತೆ ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ಗುರಿ ಹೊಂದಲಾಗಿದೆ.
ಇದನ್ನೂ ಓದಿ: IPL ಆರಂಭಕ್ಕೂ ಮುನ್ನ SRHನಲ್ಲಿ ಬದಲಾವಣೆ! ನೂತನ ನಾಯಕನಾಗಿ ವಿಶ್ವಕಪ್ ಗೆದ್ದ ವೀರನಿಗೆ ‘ಪಟ್ಟ'
ಸುಮಾರು 3,3712 ಪೋಲಿಯೋ ಬೂತ್ ಗಳನ್ನ ತೆರೆಯಲಾಗಿದ್ದು, 1,11,370 ಲಸಿಕಾ ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ. 963 ಸಂಚಾರಿ ತಂಡಗಳನ್ನ ರಚಿಸಲಾಗಿದ್ದು, 7206 ಮೇಲ್ವಿಚಾರಕರನ್ನ ನಿಯೋಜಿಸಲಾಗಿದೆ. ಈ ಹಿಂದೆ ಎಷ್ಟು ಬಾರಿ ಪೋಲಿಯೋ ಲಸಿಕೆ ಪಡೆದಿದ್ದರೂ ಸಹ ಈ ಅಭಿಯಾನದಲ್ಲಿ ಮತ್ತೆ ಲಸಿಕೆ ಹಾಕಿಸುವುದು ಅವಶ್ಯಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಆರೋಗ್ಯ ಕೇಂದ್ರವನ್ನು ಭೇಟಿ ಮಾಡಿ ಅಥವಾ ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ.
ನಿಮ್ಮ ಹತ್ತಿರದ ಪೋಲಿಯೋ ಬೂತ್ ಅನ್ನು ಗುರುತಿಸಲು “Nearby Vaccination centre Karnataka " ಆಂಡ್ರಾಯ್ಡ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.