ರಾಹುಲ್ ಪ್ರಧಾನಿ ಮಾಡೋದು ತಿರುಕನ ಕನಸು- ಬಿ.ಎಸ್.ಯಡಿಯೂರಪ್ಪ
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳುವುದೂ ಸಹ ಅಸಾಧ್ಯ ಎಂದು ಯಡಿಯೂರಪ್ಪ ಟೀಕಿಸಿದ್ದಾರೆ.
ಬೆಂಗಳೂರು : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಪ್ರಧಾನ ಮಂತ್ರಿ ಮಾಡಲು ಹೊರಟಿರುವ ಕಾಂಗ್ರೆಸ್ ಪಕ್ಷದ್ದು 'ತಿರುಕನ ಕನಸು' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಪಹಾಸ್ಯ ಮಾಡಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಹುಲ್ ಗಾಂಧಿಗೆ ರಾಜಕೀಯ ಅನುಭವ ಇಲ್ಲ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳುವುದೂ ಸಹ ಅಸಾಧ್ಯ ಎಂದು ಯಡಿಯೂರಪ್ಪ ಟೀಕಿಸಿದ್ದಾರೆ.
ಮುಂದುವರೆದು, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಆಂಜನೇಯ ವಿರುದ್ಧ ಭ್ರಷ್ಟಚಾರದ ಆರೋಪ ಮಾಡಿದ ಯಡಿಯೂರಪ್ಪ, ಹಿಂದುಳಿದ ವರ್ಗಗಳ ವಸತಿನಿಯಗಳ ಹಾಸಿಗೆ, ದಿಂಬು ಸರಬರಾಜಿನಲ್ಲೂ ಹಗರಣ ಮಾಡಿದ್ದಾರೆ. ಇನ್ನು, ಸಿದ್ದರಾಮಯ್ಯ ಹಿಂದುಳಿದ ವರ್ಗಗಳನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.