`ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ, ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ`
ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ, ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರ(ಸೆ.22) ದಿಂದ ಹದಿನೈದು ದಿನಗಳ ಕಾಲ ಕುಡಿಯುವ ನೀರು ಬಿಡುಗಡೆ ಮಾಡಲು ಸಲಹಾ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಸೆ.20) ನಡೆದ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನೀರಾವರಿ ಹಿತಾಸಕ್ತಿ ಹಾಗೂ ಕುಡಿಯುವ ನೀರು ಒದಗಿಸುವುದು ಈ ಎರಡೂ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಸಲಹಾ ಸಮಿತಿಯ ನಿರ್ಧಾರ ಆಧರಿಸಿ ಅಧಿಕಾರಿಗಳು ಆದೇಶ ಮಾಡಲಿದ್ದಾರೆ.ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರದಿಂದ ಹದಿನೈದು ದಿನಗಳವರೆಗೆ ನೀರು ಹರಿಸಲಾಗುವುದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಂದು ತಿಳಿಸಿದರು.ಶಾಸಕ ಎನ್.ಎಚ್.ಕೋನರೆಡ್ಡಿ, ಮಳೆ ಕೊರತೆಯಿಂದಾಗಿ ನೀರಿನ ಸಮಸ್ಯೆ ಉದ್ಭವಿಸಿದೆ. ಆದ್ದರಿಂದ ಜನರಿಗೆ ತೊಂದರೆಯಾಗದಂತೆ ನೀರು ಬಿಡಬೇಕಿದೆ. ನೀರಾವರಿಗೆ ಅಗತ್ಯವಿರುವ ನೀರು ಮೀಸಲಿಟ್ಟುಕೊಂಡು ಅಗತ್ಯತೆ ಆಧರಿಸಿ ಕುಡಿಯುವ ನೀರು ಬಿಡುಗಡೆಗೊಳಿಸಬೇಕು" ಎಂದು ಸಲಹೆ ನೀಡಿದರು.
ಇದನ್ನೂ ಓದಿ: ರಾಣಿ ಮಹರಾಣಿ, ನಂಜುಂಡಿ ಕಲ್ಯಾಣ ಸಿನಿಮಾನ ತುಂಬಾ ಸರಿ ನೋಡಿದಿನಿ
ಬರಗಾಲ ಎಂದು ಘೋಷಿಸಿರುವುದರಿಂದ ಪರಿಸ್ಥಿತಿ ಆಧರಿಸಿ ಕುಡಿಯುವ ಉದ್ಧೇಶಕ್ಕಾಗಿಯೇ ಹಂತ ಹಂತವಾಗಿ ಬಿಡುಗಡೆಗೊಳಿಸಬಹುದು ಎಂದು ಶಾಸಕ ಕೋನರೆಡ್ಡಿ ಅಭಿಪ್ರಾಯಪಟ್ಟರು.ಸವದತ್ತಿ ಶಾಸಕರಾದ ವಿಶ್ವಾಸ್ ವೈದ್ಯ, ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ತೀವ್ರವಾಗಿದೆ. ಆದ್ದರಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.
ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.ವಿಧಾನಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಕುಡಿಯುವ ನೀರು ಒದಗಿಸುವುದು ಅನಿವಾರ್ಯ. ಆದ್ದರಿಂದ ಅಗತ್ಯತೆ ಆಧರಿಸಿ ಸದ್ಯಕ್ಕೆ ನೀರು ಬಿಡುಗಡೆ ಮಾಡಬೇಕು ಎಂದು ಸಲಹೆ ನೀಡಿದರು.ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, "ಮುಂದಿನ ಜೂನ್ ಮಾಹೆಯವರೆಗಿನ ಲೆಕ್ಕಾಚಾರ ಇಟ್ಟುಕೊಂಡು ಜಲಾಶಯ ನೀರು ನಿರ್ವಹಣೆಯನ್ನು ಮಾಡಬೇಕಿದೆ. ಆದ್ದರಿಂದ ಸಲಹಾ ಸಮಿತಿಯು ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕು" ಎಂದು ಹೇಳಿದರು.
ಇದನ್ನೂ ಓದಿ: Arecanut today price: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಕುಸಿತ..!
ಮುಖ್ಯ ಎಂಜಿನಿಯರ್ ಅಶೋಕ ವಾಸನದ, ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಅಧೀಕ್ಷಕ ಎಂಜಿನಿಯರ್ ವಿ.ಎಸ್.ಮಧುಕರ್, ನೀರು ಬಳಕೆದಾರರ ಸಂಘದ ಅಧ್ಯಕ್ಷ ಸದುಗೌಡ ಪಾಟೀಲ, ಜಿಲ್ಲಾ ಪೊಲೀಸ್ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.