ಚಾಮರಾಜನಗರ:  ಲಕ್ಷಾಂತರ ಭಕ್ತರ ಪರಮ ದೈವ ‘ಶ್ರೀ ಮಲೆ ಮಹದೇಶ್ವರ ಸ್ವಾಮಿ’ಯ ಹೆಸರಿನಲ್ಲಿ ಸೃಷ್ಟಿಸಿರುವ  ಫೇಸ್‌ಬುಕ್ ಪೇಜ್‌ನಲ್ಲಿ ಅಶ್ಲೀಲ ವಿಡಿಯೋಗಳು ಅಪ್‌ಲೋಡ್ ಆಗುತ್ತಿದ್ದು, ಭಕ್ತರ ಭಾವನೆಗೆ ಧಕ್ಕೆ ಉಂಟಾಗಿದೆ.


COMMERCIAL BREAK
SCROLL TO CONTINUE READING

ಕೊಳ್ಳೇಗಾಲದ ಸಂಜಯ್‌ಕುಮಾರ್ 2013ರಲ್ಲಿ ‘ಶ್ರೀ ಮಲೆ ಮಹದೇಶ್ವರ ಸ್ವಾಮಿ' ಹೆಸರಿನಲ್ಲಿ ಈ ಫೇಸ್‌ಬುಕ್ ಪೇಜ್ ಕ್ರಿಯೇಟ್ ಮಾಡಿದ್ದು ಸುಮಾರು 17 ಸಾವಿರ ಅನುಯಾಯಿಗಳಿದ್ದಾರೆ. ಇದರಲ್ಲಿ ದೇವರ ಪೋಟೋಗಳು, ಪೂಜಾ ಕೈಂಕರ್ಯಗಳು ಸೇರಿದಂತೆ ಇತರ ಮಾಹಿತಿಗಳನ್ನು ಅಪ್‌ಲೋಡ್ ಮಾಡಲಾಗುತ್ತಿತ್ತು. ಆದರೆ ಕಳೆದ ಎರಡು ತಿಂಗಳ ಹಿಂದೆ ಈ ಪೇಜ್ ಅನ್ನು ಹ್ಯಾಕ್ ಮಾಡಲಾಗಿದೆ. ಸ್ಟೋರಿಗಳ ವಿಭಾಗದಲ್ಲಿ ಹುಡುಗಿಯರ ಅಶ್ಲೀಲ ಪೋಟೋ, ವಿಡಿಯೊಗಳನ್ನು ಹಾಕಲಾಗುತ್ತಿದೆ. ಫೇಸ್‌ಬುಕ್ ಪೇಜ್ ಹ್ಯಾಕ್ ಆದ ಮರು ದಿನವೇ ಅಡ್ಮಿನ್ ಸಂಜಯ್‌ಕುಮಾರ್ ಸೈಬರ್ ಕ್ರೈಂಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ. 30 ಜನರಿಂದ ಈ ಪೇಜ್ ವಿರುದ್ಧ ರಿಪೋರ್ಟ್ ಮಾಡಿಸು ಎಂದು ಪೊಲೀಸರು ಸಂಜಯ್‌ಗೆ ಸಲಹೆ ನೀಡಿದ್ದಾರೆ.


[[{"fid":"258323","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಇದನ್ನೂ ಓದಿ-  ಅವಸರವಾಗಿ ರಸ್ತೆ ದಾಟುತ್ತಿದ್ದ ಯುವತಿಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿಯಲ್ಲಿ ಸೆರೆ


ಈವರೆಗೆ 5 ಜನರಿಂದ ಸಂಜಯ್ ರಿಪೋರ್ಟ್ ಮಾಡಿಸಿದ್ದಾರೆ. ಹಾಗಾಗಿ ಹ್ಯಾಕ್ ಆಗಿರುವ ಪೇಜ್ ಅನ್ನು ಡೀ ಆ್ಯಕ್ಟಿವ್ ಮಾಡಲು ಸಾಧ್ಯವಾಗುತ್ತಿಲ್ಲ. ಪೊಲೀಸರು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸಂಜಯ್ ಮನವಿ ಮಾಡಿದ್ದಾರೆ. 


ಇದನ್ನೂ ಓದಿ- ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮಾರಣಾಂತಿಕ ಕಾಯಿಲೆ ಗೆದ್ದು ಬಂದ ಮಹಿಳೆ


ತಾನು ಕ್ರಿಯೇಟ್ ಮಾಡಿದ್ದ ಫೇಸ್‌ಬುಕ್ ಪೇಜ್ ಹ್ಯಾಕ್ ಆಗಿದೆ. ಈ ಬಗ್ಗೆ ದೂರು ಸಲ್ಲಿಸಿದ್ದರೂ ಕ್ರಮವಹಿಸಿಲ್ಲ. ಅದರಲ್ಲಿ ಅಶ್ಲೀಲ ಪೋಟೋ, ವಿಡಿಯೋಗಳು ಅಪ್‌ಲೋಡ್ ಆಗುತ್ತಿದ್ದು, ಹ್ಯಾಕ್ ಆಗಿರುವ ಬಗ್ಗೆ ತಿಳಿದ ಜನರು ನನಗೆ ಕರೆ ಮಾಡಿ ಬೈಯುತ್ತಿದ್ದಾರೆ ಎಂದು ಸಂಜಯ್  ಅಳಲು ತೋಡಿಕೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.