30 ದಿನ ಮಾದಪ್ಪನ ಹುಂಡಿಯಲ್ಲಿ ಕೋಟಿ- ಕೋಟಿ ಹಣ..!
ವಿದೇಶಿ ಹಣ ಸೇರಿದಂತೆ ಮಲೆ ಮಹದೇಶ್ವರ ದೇವಸ್ಥಾನದ ಹುಂಡಿಯಲ್ಲಿ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 19 ನೋಟುಗಳನ್ನೂ ಸಹ ಭಕ್ತರು ಹುಂಡಿಯಲ್ಲಿ ಹಾಕಿದ್ದಾರೆ.. ಈ ಕುರಿತು ಸಂಪೂರ್ಣ ವರದಿ ಇಲ್ಲಿದೆ..
ಚಾಮರಾಜನಗರ : ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 2.20 ಕೋಟಿ ರೂ. ಸಂಗ್ರಹವಾಗಿದೆ.
ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 7 ಗಂಟೆಯವರೆಗೂ ನಡೆಯಿತು.
ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ನಮ್ಮ ಪಕ್ಷದ ಎರಡು ಕಣ್ಣುಗಳಿದ್ದಂತೆ: ಲಕ್ಷ್ಮೀ ಹೆಬ್ಬಾಳಕರ್
ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,20,97,533 ನಗದು 106 ಗ್ರಾಂ ಚಿನ್ನ ಹಾಗೂ 2.1000 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಇದಲ್ಲದೆ ಇ ಹುಂಡಿಯಿಂದ 3,38,830, ವಿದೇಶಿ ನೋಟುಗಳು ಡಾಲರ್ 3, ಅರಬ್ 1, ನೇಪಾಳ 1, ಉಮನ್ ದೇಶದ 1 ಒಟ್ಟು 6. ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 19 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ. ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಾ ಅಧೀಕ್ಷಕ ನಾಗೇಶ್, ಜಿಲ್ಲಾಡಳಿತ ಕಚೇರಿ ಮುಜರಾಯಿ ಶಾಖೆಯ ಶ್ವೇತ, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.