close

News WrapGet Handpicked Stories from our editors directly to your mailbox

ಫೋನ್ ಕದ್ದಾಲಿಕೆಯಷ್ಟೇ ಅಲ್ಲ, ಆಪರೇಷನ್ ಕಮಲದ ಬಗ್ಗೆಯೂ ತನಿಖೆಯಾಗಲಿ: ಖರ್ಗೆ

ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹ. ಆದರೆ, ಈ ಹಿಂದೆ ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾದ ಆಪರೇಶನ್ ಕಮಲದ ಬಗ್ಗೆಯೂ ತನಿಖೆ ನಡೆಯಲಿ ಎಂದು ಖರ್ಗೆ ಆಗ್ರಹಿಸಿದ್ದಾರೆ.

Updated: Aug 19, 2019 , 10:12 AM IST
ಫೋನ್ ಕದ್ದಾಲಿಕೆಯಷ್ಟೇ ಅಲ್ಲ, ಆಪರೇಷನ್ ಕಮಲದ ಬಗ್ಗೆಯೂ ತನಿಖೆಯಾಗಲಿ: ಖರ್ಗೆ

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವಷ್ಟೇ ಅಲ್ಲ, ಆಪರೇಷನ್ ಕಮಲ ವಿಚಾರವನ್ನೂ ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋನ್ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹ. ಆದರೆ, ಈ ಹಿಂದೆ ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾದ ಆಪರೇಶನ್ ಕಮಲದ ಬಗ್ಗೆಯೂ ತನಿಖೆ ನಡೆಯಲಿ ಎಂದು ಖರ್ಗೆ ಆಗ್ರಹಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗುವುದು ಎಂದು ತಿಳಿಸಿದ್ದರು. ಈ ಆದೇಶವನ್ನು ಸ್ವಾಗತಿಸಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಆಪರೇಶನ್ ಕಮಲದ ಬಗ್ಗೆಯೂ ಸಿಬಿಐ ತನಿಖೆಗೆ ಆದೇಶಿಸಲು ಒತ್ತಾಯಿಸಿದ್ದರು. ಈ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕಳ ಮಲ್ಲಿಕಾರ್ಜುನ ಖರ್ಗೆ ಸಹ ತನಿಖೆಗೆ ಒತ್ತಾಯಿಸಿದ್ದು, ಸಿಎಂ ಯದಿಯುರಪ್ಪನವರು ತನಿಖೆಗೆ ಆದೇಶಿಸಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.