ಭಾರತದಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ ಎಂದ ಯುವಕನ ಮೇಲೆ ಹಲ್ಲೆ; ಮೂವರ ಬಂಧನ
ಸಂತ್ರಸ್ತ ಯುವಕನನ್ನು ಬಂಟ್ವಾಳ ತಾಲೂಕಿನ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಹಲ್ಲೆ ಸಂಬಂಧ ಆತ ಪಂದೇಶ್ವರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಈ ಸಂಬಂಧ ಮೊಯಿದೀನ್ ಸಫ್ವಾನ್, ಅಬ್ದುಲ್ ರಹೀಮ್ ಸಾದ್ ಮತ್ತು ಓರ್ವ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು: 'ಭಾರತ ಹಿಂದೂ ರಾಷ್ಟ್ರ, ಇಲ್ಲಿಗೆ ಮುಸ್ಲಿಮರು ಬರಲು ಅವಕಾಶವಿಲ್ಲ' ಎಂಬ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಯುವಕನ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಗರದ ಮಾಲ್‌ವೊಂದರಲ್ಲಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ವ್ಯಕ್ತಿಯ ಮೇಲೆ ಹಲ್ಲೆ ನಡೆದಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. "ಭಾರತ ಹಿಂದೂ ರಾಷ್ಟ್ರವಾಗಿದ್ದು, ಮುಸ್ಲಿಮರು ಬರಲು ಅವಕಾಶ ಇಲ್ಲ" ಎಂದು ಆ ವ್ಯಕ್ತಿ ಹೇಳಿದ್ದರಿಂದಲೇ ಹಲ್ಲೆ ನಡೆದಿದೆ ಎನ್ನಲಾಗಿದೆ.
ಸಂತ್ರಸ್ತ ಯುವಕನನ್ನು ಬಂಟ್ವಾಳ ತಾಲೂಕಿನ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಹಲ್ಲೆ ಸಂಬಂಧ ಆತ ಪಂದೇಶ್ವರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಈ ಸಂಬಂಧ ಮೊಯಿದೀನ್ ಸಫ್ವಾನ್, ಅಬ್ದುಲ್ ರಹೀಮ್ ಸಾದ್ ಮತ್ತು ಓರ್ವ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಆಯುಕ್ತರು, "ಈಗಾಗಲೇ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ವೀಡಿಯೋ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ" ಎಂದು ಹೇಳಿದ್ದಾರೆ.