ಧಾರವಾಡ : ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು ಮೋಸಮಾಡಿ ಹುಬ್ಬಳ್ಳಿ ತಾಲೂಕಿನ ಗುತ್ತಿಗೆದಾರನಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಹಣ ಪಡೆದಿದ್ದ ಹಾಸನ ಮೂಲದ ವ್ಯಕ್ತಿಯನ್ನು ಪೊಲೀಸ್ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಮಾರ್ಗದರ್ಶನದಲ್ಲಿ ಧಾರವಾಡ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆಯ ಸಿಬ್ಬಂದಿಗಳು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.


COMMERCIAL BREAK
SCROLL TO CONTINUE READING

ಹಾಸನ ತಾಲೂಕಿನ ದೊಡ್ಡಗಿಣಿಗೇರೆ ಗ್ರಾಮದ 29 ವರ್ಷದ ಆರೋಪಿ ಪ್ರತಾಪ್ ಡಿ.ಎಂ. ಎಂಬುವನು ಸುಷ್ಮಾ ಸುಸು ಎಂಬ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆಯನ್ನು ತೆರೆದು ಹುಬ್ಬಳ್ಳಿ ತಾಲೂಕಿನ ಗಂಗಿವಾಳ ಗ್ರಾಮದ ರುದ್ರಗೌಡ ಮಲ್ಲನಗೌಡ ಪಾಟೀಲ ಎಂಬ ಗುತ್ತಿಗೆದಾರನಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಫೇಸ್‍ಬುಕ್ ಮುಖಾಂತರ ಪರಿಚಯ ಮಾಡಿಕೊಂಡು 2017 ರಲ್ಲಿ ವಾಟ್ಸಾಪ್ ನಂಬರ್ ಪಡೆದು ಸುಮಾರು 3 ವರ್ಷಗಳಿಂದ ರುದ್ರಗೌಡ ಪಾಟೀಲ ಅವರಿಗೆ ಚಾಟಿಂಗ್ ಮಾಡಿದ್ದಾನೆ.


ಇದನ್ನೂ ಓದಿ: ಉತ್ತರ ಕರ್ನಾಟಕದ ಪ್ರಥಮ ಸಂಚಾರಿ ಪ್ರಾಣಿ ಚಿಕಿತ್ಸಾಲಯ ಲೋಕಾರ್ಪಣೆ


3 ವರ್ಷಗಳ ಚಾಟಿಂಗ್ ಸಮಯದಲ್ಲಿ ಆರೋಪಿ ಪ್ರತಾಪನು ರುದ್ರಗೌಡನಿಗೆ ತಾನು ಮೂಕಿ, ಕಿವುಡಿ ಇರುತ್ತೇನೆ ಎಂದು ಮೇಸೆಜ್ ಮಾಡುತ್ತಾ ನಾನು ನಿಮ್ಮನ್ನು ಪ್ರೀತಿಸುತ್ತೇನೆ, ಮದುವೆಯಾಗುತ್ತೇನೆ ಎಂದು ನಂಬಿಸಿದ್ದಾನೆ. ರುದ್ರಗೌಡನು ಆರೋಪಿ ಪ್ರತಾಪ ತನಗೆ ಹಾಗೂ ತನ್ನ ಪರಿಚಯಸ್ಥ 8-10 ಜನರ ಬ್ಯಾಂಕ್ ಖಾತೆಗಳಿಗೆ ಸುಮಾರು 14 ರಿಂದ 15 ಲಕ್ಷ ರೂ.ಗಳನ್ನು ಹಾಕಿಸಿಕೊಂಡು ಮೋಸ ಮಾಡಿದ್ದಾನೆ ಎಂದು ಡಿಸೆಂಬರ್ 9, 2019 ರಂದು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದನು.


ಧಾರವಾಡ (DHARWAD) ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆಯ ಸಿಪಿಐ ವಿಜಯ ಬಿರಾದಾರ ನೇತೃತ್ವದಲ್ಲಿ ಸಿಬ್ಬಂದಿಗಳು ತನಿಖೆ ಕೈಗೊಂಡು ಜನವರಿ 31, 2021 ರ ಬೆಳಿಗ್ಗೆ 11 ಗಂಟೆಗೆ ಹಾಸನ ತಾಲೂಕಿನ ದೊಡ್ಡಗಿಣಿಗೇರೆ ಗ್ರಾಮದಲ್ಲಿ ಆರೋಪಿ ಪ್ರತಾಪ ಡಿ.ಎಂ. ನನ್ನು ಬಂಧಿಸಿ, ತನಿಖೆ ಕೈಗೊಂಡು ಮೋಸ ಮಾಡಿ ಪಡೆದ ಹಣದಲ್ಲಿನ ರೂ.1,25,000/-ಗಳನ್ನು ವಶಪಡಿಸಿಕೊಂಡಿದ್ದಾರೆ.ಮಾಹಿತಿ ತಂತ್ರಜ್ಞಾನ ಕಾಯ್ದೆ 66 ಡಿ ಮತ್ತು ಐಪಿಸಿ 420 ರ ಕಲಂ ಅಡಿ ಆರೋಪಿ ಪ್ರತಾಪ ಡಿ.ಎಂ. ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.


ಇದನ್ನೂ ಓದಿ: ಧಾರವಾಡ ಜಿಲ್ಲೆಯಲ್ಲಿ ಹೆಸರು, ಉದ್ದು ಖರೀದಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಒಪ್ಪಿಗೆ- ಪ್ರಹ್ಲಾದ್ ಜೋಶಿ


ಸದರಿ ಪ್ರಕರಣದ ತನಿಖಾ ತಂಡವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ, ಡಿವೈಎಸ್‍ಪಿ ಗಳಾದ ರಾಮನಗೌಡ ಹಟ್ಟಿ, ಎಂ.ಬಿ. ಸಂಕದ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್‍ಪೆಕ್ಟರ್ ವಿಜಯ ಬಿರಾದಾರ, ಎಎಸ್‍ಐಗಳಾದ ವಿ.ಎಸ್. ಬೆಳಗಾಂವಕರ, ಪಿ.ಜಿ. ಕಾಳಿ, ಆರ್.ಎಸ್. ಜಾಧವ ಮತ್ತು ಸಿಬ್ಬಂದಿಗಳಾದ ಹೆಚ್.ಬಿ. ಐಹೋಳಿ, ಎ.ಎ. ಕಾಕರ, ಬಿ.ಎನ್. ಬಳಗಣ್ಣವರ, ಎ.ಎಂ. ನವಲೂರ, ಆರ್.ಎನ್. ಕಮದೊಡ, ಪಿ.ಜಿ. ಪಾಟೀಲ, ಎಂ.ಜಿ. ಪಾಟೀಲ, ಆರ್.ಎ. ಕಟ್ಟಿ, ಯು.ಎಂ. ಅಗಡಿ, ಬಿ.ಎಸ್. ಭೀಮಕ್ಕನವರ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.