ಬೆಂಗಳೂರು : 50 ಅಡಿ ಎತ್ತರದ ತೆಂಗಿನ ಮರ ಏರಿದ ವ್ಯಕ್ತಿಗೆ ಮರದಲ್ಲಿದ್ದಾಗಲೇ ಹೃದಯಾಘಾತವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತೆಂಗಿನ ಮರವೇರಿದ್ದ 60 ವರ್ಷದ ವ್ಯಕ್ತಿಯೊಬ್ಬರು ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಕಾಯಿ ಕೀಳಲು ತೆಂಗಿನಮರವೇರಿದ್ದ ವ್ಯಕ್ತಿಗೆ ಮರದ ಮೇಲೆಯೇ ಹೃದಯಾಘಾತವಾಗಿದೆ ಎನ್ನಲಾಗಿದೆ. ಮೈಸೂರು ರಸ್ತೆಯ ಮೈಲಸಂದ್ರದ ವಿಜಯಶ್ರೀ ಲೇಔಟ್‌ನಲ್ಲಿ ಘಟನೆ ನಡೆದಿದೆ.
ವರದಿಯ ಪ್ರಕಾರ, ಬೆಳಿಗ್ಗೆ 11 ಗಂಟೆಯ ಸುಮಾರಿಗೆ ದಾರಿಹೋಕರೊಬ್ಬರು ಈ ಬಗ್ಗೆ ಕೆಂಗೇರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಜಯಶ್ರೀ ಲೇಔಟ್‌ನ ವೆಂಕಟರಮಣ ದೇವಸ್ಥಾನದ ಬಳಿಯ ಖಾಲಿ ಸೈಟ್‌ನಲ್ಲಿರುವ ತೆಂಗಿನ ಮರದ ಮೇಲೆ ಒಂದು ಗಂಟೆಗೂ ಹೆಚ್ಚು ಕಾಲ ವ್ಯಕ್ತಿಯೊಬ್ಬರು ಚಲನರಹಿತವಾಗಿ ಕುಳಿತಿರುವುದು ಕಂಡು ಬಂದಿದೆ. ಇದರಿಂದ ಅನುಮಾನಗೊಂಡ ದಾರಿ ಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತರನ್ನು ಮೈಲಸಂದ್ರ ನಿವಾಸಿ ನಾರಾಯಣಪ್ಪ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಬಿಳಿಗಿರಿರಂಗನ ಬೆಟ್ಟದಲ್ಲಿ ಹೊಸ ಕೀಟ ಪತ್ತೆ, ದಕ್ಷಿಣ ಭಾರತದಲ್ಲಿ ಮೊದಲ ಬಾರಿ ಗೋಚರ
ಪೊಲೀಸರು ಅಗ್ನಿಶಾಮಕ ಮತ್ತು ತುರ್ತು ಸೇವೆಗಳೊಂದಿಗೆ ಸ್ಥಳಕ್ಕೆ ಧಾವಿಸಿ ಮರದಿಂದ ಮೃತದೇಹವನ್ನು ಕೆಳಗಿಳಿಸಿ ಖಾಸಗಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹೃದಯಾಘಾತದಿಂದ ನಾರಾಯಣಪ್ಪ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಮರದ ಬುಡದಲ್ಲಿ ಗೋಣಿ ಚೀಲ, ಹಗ್ಗದ ಬಂಡಲ್ ಮತ್ತು ಕುಡುಗೋಲು ಪತ್ತೆಯಾಗಿದ್ದು, ಮೃತರು ತೆಂಗಿನ ಕಾಯಿ ಕೀಳುವ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಇದನ್ನೂ ಓದಿ : ನಕಲಿ ನಿರಪೇಕ್ಷಣಾ ಪತ್ರ ನೀಡಿ ಸಿಬಿಎಸ್‌ಸಿ ಪಠ್ಯಕ್ರಮ ಸಂಯೋಜನೆ: ಲೋಕೇಶ್ ತಾಳಿಕಟ್ಟೆ ವಿಚಾರಣೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.