)
Gadag news: ಗದಗ ಜಿಲ್ಲೆಯ ಬೆಟಗೇರಿ ತರಕಾರಿ ಮಾರುಕಟ್ಟೆಯಲ್ಲಿ ಅಚ್ಚರಿ ಮೂಡಿಸುವ ಘಟನೆ ನಡೆದಿದೆ. ಮಾರುಕಟ್ಟೆಗೆ ಬಂದಿದ್ದ ವ್ಯಕ್ತಿಯ ಮೇಲೆ ಆಕಸ್ಮಿಕವಾಗಿ ಗೂಳಿ ದಾಳಿ ನಡೆಸಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಮಾಹಿತಿಯ ಪ್ರಕಾರ, ಹಿಂಬದಿಯಿಂದ ಬಂದ ಗೂಳಿ ಕ್ಷಣಾರ್ಧದಲ್ಲಿ ವ್ಯಕ್ತಿಗೆ ದಾಳಿ ನಡೆಸಿದೆ. ದಾಳಿಯ ರಭಸಕ್ಕೆ ನೆಲಕ್ಕೆ ಬಿದ್ದ ವ್ಯಕ್ತಿ ಕೈ ಮುರಿತದ ಜೊತೆಗೆ ಸೋಂಟ ಹಾಗೂ ತಲೆಗೆ ಗಂಭೀರ ಗಾಯಗೊಂಡಿದ್ದಾರೆ.
ಸ್ಥಳೀಯರು ತಕ್ಷಣವೇ ಗಾಯಾಳುವನ್ನು ಎತ್ತಿ ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಮಾರುಕಟ್ಟೆಯ ವ್ಯಾಪಾರಿಗಳು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಆಗ್ರಹ ವ್ಯಕ್ತವಾಗಿದೆ.