ಕಡ್ಡಾಯ ಕನ್ನಡ: ಪಾಲಿಕೆ ವತಿಯಿಂದ ಕನ್ನಡೇತರ ಫಲಕಗಳ ತೆರವು
ಸರಕಾರದ ಅಧಿಸೂಚನೆ ಹಾಗೂ ನಿಯಮಾವಳಿ ಪ್ರಕಾರ ವಾಣಿಜ್ಯ ಮಳಿಗೆಗಳು, ಅಂಗಡಿ-ಮುಂಗಟ್ಟುಗಳ ಫಲಕಗಳಲ್ಲಿ ಕನ್ನಡ ಬಳಕೆ ಮಾಡದೇ ಇರುವ ನಗರದ ಅಂಗಡಿಗಳ ಫಲಕಗಳ ತೆರವು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಲೋಕೇಶ್ ತಿಳಿಸಿದ್ದಾರೆ.
ಬೆಳಗಾವಿ: ಸರಕಾರದ ಅಧಿಸೂಚನೆ ಹಾಗೂ ನಿಯಮಾವಳಿ ಪ್ರಕಾರ ವಾಣಿಜ್ಯ ಮಳಿಗೆಗಳು, ಅಂಗಡಿ-ಮುಂಗಟ್ಟುಗಳ ಫಲಕಗಳಲ್ಲಿ ಕನ್ನಡ ಬಳಕೆ ಮಾಡದೇ ಇರುವ ನಗರದ ಅಂಗಡಿಗಳ ಫಲಕಗಳ ತೆರವು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಲೋಕೇಶ್ ತಿಳಿಸಿದ್ದಾರೆ.
ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡಕ್ಕೆ ಅಗ್ರ ಸ್ಥಾನ ನೀಡುವಂತೆ ಹಾಗೂ ಸಂಪೂರ್ಣ ಅನ್ಯ ಭಾಷೆಯಲ್ಲಿರುವ ಫಲಕಗಳನ್ನು ತೆರವುಗೊಳಿಸುವಂತೆ ಈಗಾಗಲೇ ನೋಟಿಸ್ ನೀಡಲಾಗಿತ್ತು.
ಇದನ್ನೂ ಓದಿ: ಕಾಲೇಜು ಅಡಳಿತ ಮಂಡಳಿಯಿಂದ ಹಿಂಸೆ ಆರೋಪ: ಆತ್ಮಹತ್ಯೆಗೆ ವಿದ್ಯಾರ್ಥಿ ಶರಣು
ನೋಟಿಸ್ ಗೆ ಸರಿಯಾಗಿ ಸ್ಪಂದಿಸದೇ ಇರುವ ಅಂಗಡಿಗಳ ಫಲಕಗಳನ್ನು ಮಾತ್ರ ಇಂದು ಪಾಲಿಕೆಯ ಸಿಬ್ಬಂದಿ ತೆರವುಗೊಳಿಸಿದ್ದಾರೆ.
ಕೆಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಅವರು ತಕ್ಷಣವೇ ಫಲಕಗಳನ್ನು ಬದಲಾಯಿಸದಿದ್ದರೆ ಪಾಲಿಕೆಯೇ ಅಧಿಕಾರಿಗಳೇ ಅಂತಹ ಫಲಕಗಳನ್ನು ತೆರವುಗೊಳಿಸಿ, ಅದಕ್ಕೆ ತಗಲುವ ವೆಚ್ಚವನ್ನು ಆಯಾ ಅಂಗಡಿ ಮಾಲೀಕರಿಂದಲೇ ವಸೂಲಿ ಮಾಡಲಾಗುವುದು ಎಂದು ಆಯುಕ್ತ ಲೋಕೇಶ್ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: 2 ಎಕರೆಯಲ್ಲಿ ಪೇರು ಹಣ್ಣು ಬೆಳೆದು 30 ಲಕ್ಷ ರೂ ಆದಾಯ: ನಿಡೋಣಿ ರೈತನ ಯಶೋಗಾಥೆ..!
ಸರಕಾರದ ಅಧಿಸೂಚನೆ ಪ್ರಕಾರ ಫಲಕಗಳ ತೆರವು ಕಾರ್ಯಾಚರಣೆ ಆರಂಭಿಸಲಾಗಿದ್ದು, ಇದೇ ರೀತಿ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ