ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ ಕಡ್ಡಾಯ-ರಾಜ್ಯ ಸರ್ಕಾರದ ಮಹತ್ವದ ಆದೇಶ
ರಾಜ್ಯ ಸರ್ಕಾರವು ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲದೆ ಮಹಿಳೆಯರಿಗೂ ಶೇ 33 ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಅದು ತನ್ನ ಆದೇಶದಲ್ಲಿ ತಿಳಿಸಿದೆ.
ಬೆಂಗಳೂರು: ರಾಜ್ಯ ಸರ್ಕಾರವು ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲದೆ ಮಹಿಳೆಯರಿಗೂ ಶೇ 33 ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಅದು ತನ್ನ ಆದೇಶದಲ್ಲಿ ತಿಳಿಸಿದೆ.
ಹೊರಗುತ್ತಿಗೆ ನೌಕರರ ನೇಮಕಾತಿ ಸಂದರ್ಭದಲ್ಲಿ ಪರಶಿಷ್ಟ ಪಂಗಡ ಹಾಗೂ ಪ.ಜಾತಿ ಹಾಗೂ ಒಬಿಸಿ ಸಮುದಾಯದ ಜನರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ, ಆದ್ದರಿಂದ ಹೊರಗುತ್ತಿಗೆಯಲ್ಲಿಯೂ ಸಹ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೆಗೊಳಿಸಬೇಕು ಎಂದು ಹಲವು ವರ್ಷಗಳಿಂದ ಸರ್ಕಾರವನ್ನು ಒತ್ತಾಯಿಸಲಾಗುತ್ತಾ ಬರಲಾಗಿತ್ತು.ಮುಂದಿನ ಏಳು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರಿ ಮಳೆ- ಹವಾಮಾನ ಇಲಾಖೆ ಮೂನ್ಸೂಚನೆ
ಈಗ ಕೊನೆಗೂ ಸರ್ಕಾರ ಈ ಬೇಡಿಕೆಗೆ ಸ್ಪಂಧಿಸಿದ್ದು, ಅದರ ಅನ್ವಯವಾಗಿ ಈಗ ಮೀಸಲಾತಿ ಜಾರಿಗೆಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕೆಲವು ಸೂಚನೆಗಳನ್ನು ಜಾರಿಗೆ ಮಾಡಿದೆ ಅದಕ್ಕೆ ಅನುಗುಣವಾಗಿ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸಬೇಕು ಎಂದು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.
2023ರ ಡಿಸೆಂಬರ್ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆಯಲ್ಲೂ ಮೀಸಲಾತಿ ನೀತಿಯನ್ನು ಜಾರಿಗೊಳಿಸುವ ಪ್ರಸ್ತಾವನೆಗೆ ಸರ್ಕಾರ ಅಂಗೀಕಾರ ನೀಡಿತ್ತು.ಈಗ ಅದು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗೆ ಹೊರಗುತ್ತಿಗೆ ಮೀಸಲಾತಿ ನೀತಿ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.
ಇನ್ನೂ ಮುಂದುವರೆದು ಈ ಆದೇಶವು ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಗಳು, ನಿಗಮ ಮಂಡಳಿಗಳು ಹಾಗೂ ವಿವಿಗಳಿಗೂ ಸಹ ಅನ್ವಯವಾಗಳಿವೆ ಎಂದು ಸರ್ಕಾರ ಹೇಳಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.