ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ.


COMMERCIAL BREAK
SCROLL TO CONTINUE READING

ಆದುದರಿಂದ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವುದು. 


ಇದನ್ನೂ ಓದಿ:ಜಿಂದಾಲ್‌ಗೆ ರಿಯಾಯ್ತಿ ದರದಲ್ಲಿ ಜಮೀನು, ವ್ಯವಹಾರ ಕುದುರಿರುವ ಸಂದೇಹ : ಬಸವರಾಜ ಬೊಮ್ಮಾಯಿ


ಮುಂದುವರೆದು, ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇಕಡ 60 ರಷ್ಟು ನಾಮಫಲಕದ ಮೇಲ್ಬಾಗದಲ್ಲಿರುವಂತೆ ಹಾಗೂ ಶೇಕಡ 40 ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ವಹಿಸುವಂತೆ ಸರ್ಕಾರದ ‌ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.