ಬಳ್ಳಾರಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಉದ್ದಿಮೆದಾರರು ತಮ್ಮ ಉದ್ದಿಮೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಪರವಾನಿಗೆಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್‍ಸಾಬ್ ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ಕನ್ನಡ ಭಾಷೆಯನ್ನು ಶೇ.60 ರಷ್ಟು ಕಡ್ಡಾಯವಾಗಿ ಬಳಸದಿದ್ದರೆ ಉದ್ದಿಮೆ ಪರವಾನಿಗೆಗಳನ್ನು ರದ್ದುಪಡಿಸಲಾಗುವುದು ಎಂದು ನಿರ್ಬಂಧ ವಿಧಿಸಲು ಸರ್ಕಾರ ಆದೇಶಿಸಿದೆ.


ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ನಾಮಫಲಕವು ಪ್ರಧಾನವಾಗಿ ಶೇ.60 ರಷ್ಟು ಸ್ಥಳ ಮೀಸಲಿರಿಸಿ ಕನ್ನಡದಲ್ಲಿರಬೇಕು. ನಾಮಫಲಕದಲ್ಲಿ ಅಶ್ಲೀಲ ಭಾಷೆ ಹಾಗೂ ಚಿತ್ರಗಳನ್ನು ಪ್ರದರ್ಶಿಸುವಂತಿಲ್ಲ. ಅನ್ಯಭಾಷೆಯ ನಾಮಫಲಕಕ್ಕಿಂತ ಕನ್ನಡ ನಾಮಫಲಕ ದೊಡ್ಡದಾಗಿರುವಂತೆ ಅಳವಡಿಸಬೇಕು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಹಳಸಿದ ಬಾಯಲ್ಲಿ ದಾಲ್ಚಿನ್ನಿ ನೀರು ಕುಡಿಯಿರಿ: ಈ ಕಾಯಿಲೆಗಳಿಗೆ ಪರ್ಮನೆಂಟ್ ರಿಲೀಫ್ ಸಿಗುತ್ತೆ!


ಈ ಪ್ರಕಟಣೆಗೊಂಡ ದಿನದಿಂದ ಫೆ.15 ರೊಳಗಾಗಿ ಎಲ್ಲಾ ಉದ್ದಿಮೆ, ಅಂಗಡಿಗಳ ನಾಮಫಲಕಗಳು ಪ್ರಧಾನವಾಗಿ ಕನ್ನಡದಲ್ಲಿರಬೇಕು. ತಪ್ಪಿದಲ್ಲಿ ಅಂತಹ ಯಾವುದೇ ನಾಮಫಲಕಗಳು ಕಂಡುಬಂದಲ್ಲಿ ನಿಯಮಾನುಸಾರ ದಂಡವಿಧಿಸಿ ತೆರವುಗೊಳಿಸಲು ಕ್ರಮ ವಹಿಸಲಾಗುವುದು ಹಾಗೂ ಉದ್ದಿಮೆಗಳ ಉದ್ದಿಮೆ ಪರವಾನಿಗೆಗಳನ್ನು ರದ್ದುಪಡಿಸಲಾಗುವುದು ಎಂದು ಆಯುಕ್ತ ಜಿ.ಖಲೀಲ್‍ಸಾಬ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ